
ಹೊಸನಗರ: ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆ ವತಿಯಿಂದ ಬುಧವಾರ ತಾಲೂಕು ಪಂಚಾಯತ್ ಆವರಣದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನ ಹಾಗೂ ಪರಿಶಿಷ್ಟ ಪಂಗದವರಿಗೆ ಸೋಲಾರ್ ಗಳನ್ನ ಶಾಸಕರಾದ ಗೋಪಾಲಕೃಷ್ಣ ಬೇಳೂರು ವಿತರಿಸಿದರು.
ವಿತರಣೆ ಬಳಿಕ ಮಾತನಾಡಿದ ಅವರು ಸರ್ಕಾರ ವಿವಿಧ ಜನಪರ ಯೋಜನೆಗಳ ಮೂಲಕ ಕೋಟ್ಯಾಂತರ ರೂಗಳನ್ನು ನಾಗರಿಕರಿಗೆ ಮೀಸಲಿಡುತ್ತಿದೆ ಈ ನಿಟ್ಟಿನಲ್ಲಿ ಅಂಗವಿಕಲರಿಗೆ ಉಚಿತ ಬೈಕ್ ಗಳನ್ನು ಹಾಗೆಯೇ ಪರಿಶಿಷ್ಟ ಪಂಗಡದವರಿಗೆ ಸೋಲಾರ್ ಗಳನ್ನ ವಿತರಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನಗಳಿಂದ ಗ್ಯಾರಂಟಿ ಸೇರಿ ವಿವಿಧ ಜನಪರ ಯೋಜನೆಗಳನ್ನ ನೀಡುತ್ತಲೇ ಬಂದಿದೆ ಅದರಲ್ಲಿಯೂ ಅಂಗವಿಕಲರಿಗೆ ಮುಖ್ಯ ವಾಹಿನಿಗೆ ಬರಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿ ಪ್ರತ್ಯೇಕ ಅನುದಾನವನ್ನು ಮೀಸಲಿಡುತ್ತಿದೆ ಎಂದರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜೊತೆಯಲ್ಲಿ ರಾಜ್ಯದ ಅಭಿವೃದ್ಧಿಯಲ್ಲಿ ಜನಪರವಾದ ಯೋಜನೆಗಳನ್ನು ಅನುಷ್ಠಾನಗೊಳಿಸುವುದರಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾದ ಕೆಲಸವನ್ನು ಮಾಡುತ್ತಿದ್ದು ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದರು. ತಹಸಿಲ್ದಾರ್ ರಶ್ಮಿ ಎಚ್ ಜೆ,
ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಕುಮಾರ್, ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.
SOLAR AND SCOOTER:...
