DINESH MANGALORE:ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟ ದಿನೇಶ್ ಮಂಗಳೂರು ನಿಧನ..

ಕುಂದಾಪುರ:ಕೆಜಿಎಫ್ ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದ್ದ ಚಿತ್ರರಂಗದ ಹಿರಿಯ ನಟ ದಿನೇಶ್ ಮಂಗಳೂರು ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರಾಗಿದ್ದು, ಇವರು ನಾಗಮಂಡಲ, ಕೆಜಿಎಫ್‌-1, ಉಳಿದವರು ಕಂಡಂತೆ, ರಿಕ್ಕಿ, ಕಿರಿಕ್ ಪಾರ್ಟಿ ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು.
ಉಡುಪಿ ಜಿಲ್ಲೆಯ ಕುಂದಾಪುರದ ತಮ್ಮ ಸ್ವಗೃಹದಲ್ಲಿ ಹಿರಿಯ ನಟ ದಿನೇಶ್ ಮಂಗಳೂರು ಕೊನೆಯುಸಿರೆಳೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.
ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕುಂದಾಪುರದ ಕೋಟೇಶ್ವರದ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಕುಂದಾಪುರದ ಬಳಿ ಬಾಡಿಗೆ ಮನೆಯಲ್ಲಿದ್ದ ದಿನೇಶ್ ಮಂಗಳೂರು ಅವರಿಗೆ ಸಿನಿಮಾವೊಂದರ ಚಿತ್ರೀಕರಣದ ಸಂದರ್ಭ ಪಾರ್ಶ್ವ ವಾಯು ಆಟ್ಯಾಕ್ ಆಗಿತ್ತು. ಆ ವೇಳೆ ತಕ್ಷಣ ಅವರನ್ನು ಬೆಂಗಳೂರಿಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು.ನಂತರ ಚಿಕಿತ್ಸೆಯಿಂದ ಗುಣಮುಖರಾಗಿದ್ದ ನಟ ದಿನೇಶ್ ಮಂಗಳೂರು ಅವರು ಕುಂದಾಪುರದಲ್ಲಿ ನೆಲೆಸಿದ್ದರು. ಮತ್ತೆ ಕಳೆದ ವಾರ ಪುನಃ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಕುಂದಾಪುರದ ಕೋಟೇಶ್ವರದ ಸರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಇಂದು ಮುಂಜಾನೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸಿದೆ ಅವರು ಮೃತಪಟ್ಟಿದ್ದಾರೆ. ಅಪಾರ ಅಭಿಮಾನಿಗಳು, ನಟ, ನಟಿಯರ ಆತ್ಮೀಯರಾಗಿದ್ದ ಹಿನ್ನಲೆಯಲ್ಲಿ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕಾಗಿ ಕುಂದಾಪುರದಿಂದ ಬೆಂಗಳೂರಿಗೆ ರವಾನೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

DINESH MANGALORE...


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading

Subscribe