
ಶಿವಮೊಗ್ಗ: ಬಿಪಿಎಲ್ ಕಾರ್ಡ್ ಹೊಂದಿದ್ದು ಆದರೆ ತಮ್ಮ ಮಕ್ಕಳನ್ನು ಲಕ್ಷ ಲಕ್ಷ ಹಣ ಕೊಟ್ಟು ಖಾಸಗಿ ಶಾಲೆಗಳಲ್ಲಿ ಶಿಕ್ಷಣವನ್ನ ಕೊಡಿಸುತ್ತಿರುವಂತಹ ಪೋಷಕರ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಬೇಕು ಅಲ್ಲದೆ ಈ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರ ಮುಂದಾಗಬೇಕು ಎಂದು ಜನ ಸಂಗ್ರಾಮ ಪರಿಷತ್ ಸದಸ್ಯ ಗಿರೀಶ್ ಆಚಾರ್ ಜಿಲ್ಲಾಧಿಕಾರಿಗಳ ಮೂಲಕವಾಗಿ ಸರ್ಕಾರಕ್ಕೆ ಮನವಿಯನ್ನು ಮಾಡಿದ್ದಾರೆ ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳು ಸರಕಾರದ ಪವಿತ್ರವಾದ ಆಸ್ತಿಯಾಗಿರುತ್ತದೆ. ಸದರಿ ಅಮೂಲ್ಯವಾದ ಸರಕಾರಿ ಕಾಜಿಗಳನ್ನು ಸಂರಕ್ಷಿಸುವುದು ಸರಕಾರದ ಮುಖ್ಯ ಕರ್ತವ್ಯವಾಗಿರುತ್ತದೆ. ಏಕೆಂದರೆ ಇತ್ತೀಚಿನ ದಿನಮಾನ ಕಾಲದಲ್ಲಿ ವಿದ್ಯಾರ್ಥಿಗಳ ಪೋಷಕರುಗಳು ಆಂಗ್ಲ ಮಾದ್ಯಮದ ಹುಚ್ಚಾಸೆಯಿಂದ ಲಕ್ಷಾಂತರ ರೂಗಳನ್ನು ವೆಚ್ಚ ಮಾಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳನ್ನು ಮುಂದಿನ ದಿನದಲ್ಲಿ ಮುಚ್ಚುವ ಸಂಭವ ಎದುರಾಗಿದೆ. ಸರಕಾರ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಬೇಕಾದರೆ ಹಾಗೂ ಸಂರಕ್ಷಿಸಬೇಕಾದರೆ ರಾಜ್ಯದಲ್ಲಿ ಶೇಕಡ 80%ರಷ್ಟು ಜನರು ನಾವು ಬಡವರೆಂದು ಬಿ.ಪಿ.ಎಲ್ ಕಾರ್ಡ್ ಪಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸರಕಾರ ಬಡತನ ರೇಖೆಯುಳ್ಳಂತಹ ವ್ಯಕ್ತಿಗಳನ್ನು ಗುರುತಿಸಿ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಿದ ನಂತರ ಬಿಪಿಎಲ್ ಕಾರ್ಡ್ ಪಡೆದ ವ್ಯಕ್ತಿಗಳು ಜನರು ಲಕ್ಷಾಂತರ ರೊಗಳನ್ನು ಖರ್ಚು ಮಾಡಿ ಅವರವರ ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಖಾಸಗಿ ಶಾಲೆಗೆ ಸೇರಿಸುತ್ತಿರುವುದು ಸತ್ಯವಾದ ಸಂಗತಿಯಾಗಿರುತ್ತದೆ. ಬಿಪಿಎಲ್ ಕಾರ್ಡ ಪಡೆದುಕೊಂಡು ಅವರವರ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ದುಪ್ಪಟ್ಟು ಹಣ ಖರ್ಚು ಮಾಡಿ ಐಶಾರಾಮಿ ಶಾಲೆಗಳಿಗೆ ಸೇರಿಸುವ ಪೋಷಕರುಗಳು ಹಣ ಬಲಹೀನರಾಗಿರುವುದಿಲ್ಲ. ರಾಜ್ಯದ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬೇಕಾದೆ ಹಾಗೂ ಸಂರಕ್ಷಿಸಬೇಕಾದರೆ ಮಾನ್ಯ ಘನ ಸರಕಾರ, ಬಿಪಿಎಲ್ ಕಾರ್ಡ್ ಪಡೆದ ವ್ಯಕ್ತಿ ಕಡ್ಡಾಯವಾಗಿ ಅವರ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಇಲ್ಲವಾದರೆ ಅವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ಆದೇಶವನ್ನು ಹೊರಡಿಸಬೇಕು ಎಂದು ಈ ಮೂಲಕ ಅವರು ಮನವಿ ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ..
GIRISH ACHAR..
