
ಹೊಸನಗರ:ಖಾಸಗಿ ಸ್ಲೀಪರ್ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲೂಕಿನ ಜಯನಗರ ಸಮೀಪ ಸಂಭವಿಸಿದೆ.

ಇಂದು ಮುಂಜಾನೆ ಬೆಂಗಳೂರಿನಿಂದ ಶಿವಮೊಗ್ಗ- ಹೊಸನಗರ ಮಾರ್ಗವಾಗಿ ಕುಂದಾಪುರ ಹೊರಟಿದ್ದ ಖಾಸಗಿ ಸ್ಲೀಪರ್ ಬಸ್ ಹೊಸನಗರ ತಾಲೂಕಿನ ಜಯನಗರ ಸಮೀಪದ ಚಾಮುಂಡಿ ಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಹಲವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನ ಚಿಕಿತ್ಸೆಗಾಗಿ ಹೊಸನಗರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ..
Discover more from Prasarana news
Subscribe to get the latest posts sent to your email.
