
ಹೊಸನಗರ: ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಬ್ರಹ್ಮೇಶ್ವರ ಸಮೀಪ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಡಿಯಾಪುರ ಗ್ರಾಮದ ವಸಂತ (31 ವರ್ಷ) ಎಂದು ಗುರುತಿಸಲಾಗಿದೆ.
ಮೃತರು ಬ್ರಹ್ಮೇಶ್ವರ ಮಾರ್ಗವಾಗಿ ಸಿಡಿಯಾಪುರ ಗ್ರಾಮದಲ್ಲಿರುವ ತಮ್ಮ ನಿವಾಸಕ್ಕೆ ತೆರಳುವ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ ವಸಂತ್ ಅವರ ಮೃತದೇಹವನ್ನು ಹೊಸನಗರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗಾಗಿ ತರಲಾಗಿದ್ದು ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಪ್ರಕರಣವನ್ನು ದಾಖಲಿಸಲಾಗಿದೆ.
ACCIDENT HOSANAGARA..
Discover more from Prasarana news
Subscribe to get the latest posts sent to your email.
