
ಸಾಗರ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 20 ಕ್ಕೂ.ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ನಡೆದಿದೆ.
ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್ ನಲ್ಲಿ 49 ಜನ ಪ್ರಯಾಣಿಕರಿದ್ದು 20 ಕ್ಕು ಅಧಿಕ ಜನರಿಗೆ ಗಂಭೀರ ಗಾಯವಾಗಿದೆ. ಇವರನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಗಳಲ್ಲಿ ಮಣಿಪಾಲ್ ಹಾಗೂ ಮಂಗಳೂರಿಗೆ ರವಾನಿಸಲಾಗಿದೆ.
*ಗಾಯಾಳುಗಳ ಚಿಕಿತ್ಸೆಗೆ ನೆರವಾದ ಶಾಸಕ ಗೋಪಾಲಕೃಷ್ಣ ಬೇಳೂರು..

ಅಪಘಾತದ ವಿಷಯ ಆಸ್ಪತ್ರೆಗೆ ದಿಡೀರ್ ದೌಡಾಯಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಖುದ್ದು ನಿಂತು ಎಲ್ಲಾ ಗಾಯಾಳುಗಳಿಗೆ ಚಿಕಿತ್ಸೆ ದೊರಕಿಸಿಕೊಟ್ಟು ಮಂಗಳೂರು ಹಾಗೂ ಮಣಿಪಾಲ್ ಗೆ ಆಂಬುಲೆನ್ಸ್ ವ್ಯವಸ್ತೆ ಮಾಡಿಕೊಟ್ಟಿದ್ದಾರೆ.
ಈ ಬಗ್ಗೆ ಅಲ್ಲಿನ ಸ್ಥಳೀಯ ಶಾಸಕ ರಾಜೇಶ್ ನಾಯ್ಕ್ ಕರೆ ಮಾಡಿದ ನಂತರ ನನಗೆ ವಿಷಯ ತಿಳಿದಿದ್ದು ಕೂಡಲೇ ಆಸ್ಪತ್ರೆಗೆ ಧಾವಿಸಿ ಬಂದು ಸೂಕ್ತ ಚಿಕಿತ್ಸೆಗೆ ಸೂಚಿಸಿ ಎಲ್ಲಾ ಗಾಯಾಳುಗಳಿಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇನೆ , ಈ ಸಂಧರ್ಭದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.
ACCIDENT:GKB
Discover more from Prasarana news
Subscribe to get the latest posts sent to your email.
