
ಹೊಸನಗರ: ಕೇಂದ್ರ ಶಿಕ್ಷಣ ಸಚಿವಾಲಯವು ನೀಡುವ ಪ್ರಸಕ್ತ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವ ತಾಲೂಕಿನ ಹುಂಚ ಹೋಬಳಿ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರನ್ನು ಪಟ್ಟಣದ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಶಾಲೆಯ ಆವರಣದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ವೇಳೆ ಬಳಗದ ಅಧ್ಯಕ್ಷ ಪ್ರಶಾಂತ್ ಸುರೇಶ್, ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಮಾರ್ಷಲ್ ಶರಾಂ, ಇಂದಿರಾಗಾಂಧಿ ವಾತಿಶಾಲೆಯ ಮುಖ್ಯ ಶಿಕ್ಷಕ ಯೋಗೀಶ್,
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಕೆ.ಜಿ.ನಾಗೇಶ್, ಪತ್ರಕರ್ತ ಶ್ರೀಕಂಠ ಶರ್ಮ, ಮನು ಸುರೇಶ್, ಗಣೇಶ್, ಸಮಾಜ ಸೇವಕ ಸುಧೀಂದ್ರ ಪಂಡಿತ್, ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು
AN HONOR..
Discover more from Prasarana news
Subscribe to get the latest posts sent to your email.
