
ಹೊಸನಗರ: ಇತ್ತೀಚೆಗೆ ಬೆಂಗಳೂರಿನಲ್ಲಿ ಜವಾಹರ್ ಬಾಲ ಭವನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ನೇತೃತ್ವದಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಶ್ರೀ ವ್ಯಾಸ ಮಹರ್ಷಿ ಗುರುಕುಲದ ವಿದ್ಯಾರ್ಥಿನಿ ಚುಕ್ಕಿ ಎಂ. ಬ್ಯಾಣದ ಸೃಜನಾತ್ಮಕ ಕಲಾ ಪ್ರದರ್ಶನ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಕಲಾ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು

ಹಾಗೆಯೇ 2024 25 ನೇ ಸಾಲಿನ ಮಕ್ಕಳ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಬಾಳೂರು ಸರ್ಕಾರಿ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ಆನೆಕೆರೆ ನಿವಾಸಿ ಲಕ್ಷ್ಮಿ ಮತ್ತು ರವಿ ದಂಪತಿಗಳ ಪುತ್ರ ಮಣಿಕಂಠ ವಿದ್ಯಾರ್ಥಿ ಗಳಿಗೆ ತಾಲೂಕು ಆಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರವಾಗಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಆತ್ಮೀಯವಾಗಿ ಸನ್ಮಾನಿಸಿದರು.
AN HONOR
Discover more from Prasarana news
Subscribe to get the latest posts sent to your email.
