ANTI-DRUG:ಮಾದಕ ವಸ್ತು ವಿರೋಧಿ ದಿನಾಚರಣೆ: ಹೊಸನಗರ ಪೊಲೀಸ್ ಇಲಾಖೆ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಸಹಯೋಗದಲ್ಲಿ ಮ್ಯಾರಥಾನ್ ಓಟ

ಹೊಸನಗ: ಪಟ್ಟಣದ ಹೊರವಲಯದ ಗೇರುಪುರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ಮತ್ತು ಅಕ್ರಮ ಕಳ್ಳ ಸಾಗಣೆ ವಿರುದ್ಧದ ದಿನಾಚರಣೆಯನ್ನು ಆಚರಿಸಲಾಯಿತು.
ವಸತಿ ಶಾಲೆ ಆವರಣದಲ್ಲಿ ವೃತ ನಿರೀಕ್ಷಕ ಗೌಡಪ್ಪಗೌಡ, ಪಿಎಸ್ಐ ಶಂಕರಗೌಡ ಪಾಟೀಲ್ ಮತ್ತು ಸಿಬ್ಬಂದಿಗಳು ವಸತಿ ಶಾಲೆ ಮುಖ್ಯಸ್ಥ ಚಂದ್ರಶೇಖರ್ ಹಾಗೂ ಅವರ ಸಿಬ್ಬಂದಿಗಳು ಶಾಲಾ ಆವರಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ವೃತ್ತ ನಿರೀಕ್ಷಕ ಗೌಡಪ್ಪ ಗೌಡ ಮಾತನಾಡಿ, ಯುವಜನರ ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯಕರ ಜೀವನ ಶೈಲಿ ರೂಪಿಸಿಕೊಳ್ಳಬೇಕು. ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯ ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯದ ಕಡೆ ಹೆಚ್ಚಿನ ಜೀವನಶೈಲಿ ಅಳವಡಿಸಿಕೊಳ್ಳಬೇಕು. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಹಾಗೂ ಕರ್ತವ್ಯವಾಗಿದೆ. ಸಮಾಜದ ಸಹಭಾಗಿತ್ವದಿಂದಲೇ ಈ ಪಿಡುಗನ್ನು ತಡೆಯಲು ಸಾಧ್ಯ. ಇತ್ತೀಚಿನ ದಿನಗಳಲ್ಲೇ ಯುವ ಜನತೆ ಹಾಗೂ ವಿದ್ಯಾರ್ಥಿಗಳ ಮಾದಕ ವಸ್ತುಗಳ ದುಶ್ಚಟಗಳಿಗೆ ಒಳಗಾಗುತ್ತಿರುವುದು ಅಳವಳಕಾರಿಯಾಗಿದೆ. ಈ ಪಿಡುಗುಗಳನ್ನು ತಡೆಗಟ್ಟಲು ಪೋಷಕರು  ಶಿಕ್ಷಕರು ಸಾಮಾಜಿಕ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.
ಗೇರುಪುರದಿಂದ ಹೊಸನಗರ ಪಟ್ಟಣಕ್ಕೆ ಹಾಗೂ ಪುನಃ ಹೊಸನಗರ ಪಟ್ಟಣದಿಂದ ಗೇರುಪುರಕ್ಕೆ ಆರು ಕಿಲೋಮೀಟರ್ ಗಳ ಮ್ಯಾರಥಾನ್ ಓಟ ನಡೆಸುವ ಮೂಲಕ ಜನಜಾಗೃತಿ ಮೂಡಿಸಿದರು.

ANTI-DRUG


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading