
ಹೊಸನಗರ: ಇತ್ತೀಚೆಗೆ ಬೆಂಗಳೂರಿನಲ್ಲಿ ಜವಾಹರ ಬಾಲ ಭವನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ನೇತೃತ್ವದಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಶ್ರೀ ವ್ಯಾಸ ಮಹರ್ಷಿ ಗುರುಕುಲದ ವಿದ್ಯಾರ್ಥಿನಿ ಚುಕ್ಕಿ ಎಂ. ಬ್ಯಾಣದ ಸೃಜನಾತ್ಮಕ ಕಲಾ ಪ್ರದರ್ಶನ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಕಲಾ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾಳೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪ್ರಶಸ್ತಿ ವಿತರಿಸಿದರು. ಶಾಸಕರಾದ ರಿಜ್ವನ್ ಅರ್ಷಾದ್, ಕೋನ ರೆಡ್ಡಿ, ಶ್ರೀಮತಿ ಮಂಜುಳಾ ಅರವಿಂದ್ ಲಿಂಬಾವಳಿ, ಕೋಲಾರ ಶಾಸಕ ಮಂಜುನಾಥ್, ಬಾಲ ಭವನ ಅಧ್ಯಕ್ಷ ನಾಯ್ಡು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
AWARD:HOSANAGARA
Discover more from Prasarana news
Subscribe to get the latest posts sent to your email.
