AWARD:SOCIAL SERVICE: ಸೀಮಾ ಶೆರಾವ್ ಅವರಿಗೆ ಚೈತನ್ಯ ಶ್ರೀ ಪ್ರಶಸ್ತಿ..

ಹೊಸನಗರ: ಸಮಾಜ ಸೇವೆ ಮೂಲಕ ತಮ್ಮನ್ನು ಗುರುತಿಸಿಕೊಂಡಿರುವ ಪಟ್ಟಣದ ನಿವಾಸಿ ಸೀಮಾ ಶೆರಾವ್ ಅವರು ರಾಜ್ಯಮಟ್ಟದ ಚೈತನ್ಯ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದೇ ಡಿಸೆಂಬರ್ 28 ಮತ್ತು 29ರಂದು ಬೆಂಗಳೂರಿನ ಬಾಗಲೂರಿನ ವಿಜಿ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟ, ರಾಜ್ಯ ಮಾನವ ಬಂಧುತ್ವ ವೇದಿಕೆ, ರಾಜ್ಯ ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಹಯೋಗದಲ್ಲಿ ರಂಗಭೂಮಿ ಕಲಾವಿದೆ, ಖ್ಯಾತ ಚಲನಚಿತ್ರ ನಟಿ, ಮಾಜಿ ಸಚಿವೆ ಉಮಾಶ್ರೀ ಸಮ್ಮೇಳನದ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಅವರ ಪ್ರಶಸ್ತಿ ಸ್ವೀಕರಿಸಲಿದ್ದು,

ಪ್ರಶಸ್ತಿಗೆ ಭಾಜನರಾದ ಸೀಮಾ ಶೆರಾವ್ ಅವರನ್ನು ತಾಲೂಕು ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಪದಾಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿ, ಸಮ್ಮೇಳನದಲ್ಲಿ ಭಾಗವಹಿಸಲು ಶುಭ ಹಾರೈಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಕೃಷ್ಣವೇಣಿ ಮಂಜುನಾಥ್, ಸದಸ್ಯೆ ಗಾಯತ್ರಿ ನಾಗರಾಜ್, ಆಶ್ರಯ ಸಮಿತಿ ಸದಸ್ಯೆ ರಾಧಿಕ ಶ್ರೇಷ್ಠಿ, ಸುಶೀಲಾ ಕೃಷ್ಣ ಕಂಚುಗಾರ್ ಮೊದಲಾದವರು ಉಪಸ್ಥಿತರಿದ್ದರು.

AWARD:SOCIAL SERVICE


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading