

ರಿಪ್ಪನ್ ಪೇಟೆ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಹೇಳಿದರು
ಗರ್ತಿಕೆರೆ ಗ್ರಾಮದ ಅಮೃತ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.ಇಂದಿನ ಯುವಕರು ತಂದೆ, ತಾಯಿ ಹಾಗೂ ಗುರುಗಳ ಋಣ ಎಂದಿಗೂ ಮರೆಯಬಾರದು. ಸದ್ಗುಣ ಸಚ್ಚಾರಿತ್ರ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಬೇಕು. ಮಾದಕ ವಸ್ತುಗಳು ನಮ್ಮ ವ್ಯಕ್ತಿತ್ವಕ್ಕೆ ಹಾಗೂ ಆರೋಗ್ಯಕ್ಕೆ ಮಾರಕವಾಗಿವೆ. ಇನ್ನು ಮೊಬೈಲ್ ಎಷ್ಟು ಪ್ರಯೋಜನವಾಗಿದೆ ಅಷ್ಟೇ ದುಷ್ಪರಿಣಾಮವಿದೆ. ವಿದ್ಯಾರ್ಥಿಗಳಾದ ನೀವು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ನಜ್ ಹತ್ ಉಲ್ಲಾ ವಹಿಸಿದ್ದರು.
ಈ ಸಂಧರ್ಭದಲ್ಲಿ ಹೊಸನಗರ ವೃತ್ತದ ಸಿಪಿಐ ಗುರಣ್ಣ ಹೆಬ್ಬಾಳ,, ಅಬಕಾರಿ ವೃತ್ತ ನಿರೀಕ್ಷಕ ನಾಗರಾಜ್ ಹಾಗೂ ಇನ್ನಿತರರಿದ್ದರು.
ಕಾಲೇಜಿನ ಎನ್ ಎಸ್ ಎಸ್ ಸಂಚಾಲಕರು ಹಾಗೂ ಉಪನ್ಯಾಸಕರಾದ ಹಾಲಪ್ಪ ಸಂಕೂರು ಸ್ವಾಗತಿಸಿ ದರು, ಫ್ರಾನ್ಸಿಸ್ ಬೆಂಜೆಮಿನ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು..
AWARENESS PROGRAME.
Discover more from Prasarana news
Subscribe to get the latest posts sent to your email.