
ಹೊಸನಗರ: ಪಟ್ಟಣ ವ್ಯಾಪ್ತಿಯ ವಿವಿಧ ಸರ್ಕಾರಿ ಕಚೇರಿ ಗಳಲ್ಲಿ ಆಯುಧ ಪೂಜೆಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಸರ್ಕಾರಿ ಕಚೇರಿಗಳಲ್ಲದೇ ಖಾಸಗಿ ಸಂಸ್ಥೆಗಳ ಕಚೇರಿಗಳು, ಕೈಗಾರಿಕೆಗಳು, ಅಂಗಡಿ-ಮುಂಗಟ್ಟುಗಳಲ್ಲಿ ಆಯುಧ ಪೂಜೆಯನ್ನುಮಾಡಲಾಯಿತು.




ಕಚೇರಿಗಳನ್ನ ತಳಿರು-ತೋರಣಗಳಿಂದ ಸಿಂಗರಿಸಿ, ಕಚೇರಿ ಮುಂದೆ ರಂಗೋಲಿ ಬಿಡಿಸಿ ವಿಶೇಷವಾಗಿ ಅಲಂಕರಿಸಲಾಗಿತ್ತು.
ಪರಸ್ಪರ ಸಿಹಿ ಹಂಚಿ ಆಯುಧ ಪೂಜೆ, ವಿಜಯದಶಮಿಯ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದುದು ಸಾಮಾನ್ಯವಾಗಿ ಕಂಡುಬಂದಿತು.ಹೀಗಾಗಿ ಬಹುತೇಕ ಕಚೇರಿಗಳಲ್ಲಿ ದೈನಂದಿನ ಕೆಲಸ ಕಾರ್ಯಗಳ ಜೊತೆ ಹಬ್ಬದ ಸಡಗರ-ಸಂಭ್ರಮವು ಹೆಚ್ಚಾಗಿತ್ತು. ಒಂದೇ ರೀತಿಯ ಊಡುಗೆಗಳನ್ನು ತೊಟ್ಟು ತಮ್ಮ ತಮ್ಮ ವಾಹನಗಳನ್ನು ಸಿಂಗರಿಸಿ ಆಯುಧ ಪೂಜೆಯನ್ನು ಆಚರಿಸಲಾಯಿತು. ಪ್ರತಿ ಕಚೇರಿಗಳಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿತ್ತು..
AYUDHA POOJE..
Discover more from Prasarana news
Subscribe to get the latest posts sent to your email.
