
ಹೊಸನಗರ: 2025-26 ನೇ ಸಾಲಿನ ಕೃಷಿ ಇಲಾಖೆಯ
ಆತ್ಮ ಯೋಜನೆಯಡಿ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಐದು ಪ್ರಗತಿಪರ ರೈತರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ರೈತರಿಗೆ ಕೃಷಿ ಇಲಾಖೆ ವತಿಯಿಂದ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಅರ್ಜಿ ಸಲ್ಲಿಸುವ ರೈತರು ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ಸೇರಿದಂತೆ ಇತರೆ ಕೃಷಿ ಚಟುವಟಿಕೆಗಳಲ್ಲಿ ಸಂಶೋಧನೆ ಅಥವಾ ಉತ್ತಮ ಸಾಧನೆ ಮಾಡಿರಬೇಕು.ಕೃಷಿ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ಮಾಹಿತಿಗಳಾದ ಆಧಾರ್ ಪಾಸ್ ಪುಸ್ತಕ. ಪಹಣಿ ಪ್ರತಿ ಮತ್ತು ಸೂಕ್ತ ಛಾಯಾಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಇದೇ ಅಕ್ಟೋಬರ್ 15 ಕೊನೆ ದಿನವಾಗಿದ್ದು, ಈ ಸಂಬಂಧ ಹೆಚ್ಚಿನ ಮಾಹಿತಿಗೆ ಆತ್ಮಸಿಬ್ಬಂದಿ ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸುವಂತೆ ಇಲ್ಲಿನ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BEST FORMER...
Discover more from Prasarana news
Subscribe to get the latest posts sent to your email.
