
ಹೊಸನಗರ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಹೊಸ ಗಸ್ತು ವಾಹನಗಳನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸುತ್ತಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು ಶುಕ್ರವಾರ ಹೊಸನಗರ ಪೊಲೀಸ್ ಠಾಣಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಬುಲೆರೋ ಗಸ್ತು ವಾಹನವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಿ ಮಾತನಾಡಿ ಪ್ರಮುಖವಾಗಿ ಪೊಲೀಸ್ ಗಸ್ತು ವ್ಯವಸ್ಥೆಯನ್ನು ಸುಧಾರಿಸುವುದು; ಈ ಮೂಲಕ ಅಪರಾಧ ಚಟುವಟಿಕೆಗಳಿಗೆ ಮಟ್ಟ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಅಗತ್ಯವಿರುವ ಎಲ್ಲ ಸೌಕರ್ಯಗಳನ್ನು ಸರ್ಕಾರ ಒದಗಿಸುತ್ತಿದೆ ಅದರಂತೆಯೇ ಈ ದಿನ ಕ್ಷೇತ್ರದ ಅಗತ್ಯ ಇರುವ ಕೆಲವು ಪೊಲೀಸ್ ಠಾಣೆಗಳಿಗೆ ನೂತನ ಬುಲೆರೋ ವಾಹನವನ್ನು ಹಸ್ತಾಂತರಿಸಿದ್ದೇವೆ ಎಂದು ತಿಳಿಸಿದರು ಈ ಸಂದರ್ಬದಲ್ಲಿ ವೃತ್ತ ನಿರೀಕ್ಷಕರಾದ ಗೌಡಪ್ಪಗೌಡ ಹಾಗೂ ಸಬ್ ಇನ್ಸ್ಪೆಕ್ಟರ್ ಶಂಕರ್ ಗೌಡ ಪಾಟೀಲ್ ಶಾಸಕರಿಂದ ವಾಹನ ಪಡೆದುಕೊಂಡರು ಈ ಸಂದರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ಚಂದ್ರಮೌಳಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ ಹೂವಿನ ಕೋಣೆ ಮುಖಂಡರಾದ ಪ್ರಭಾಕರ್, ವಿನಯ್ ಕುಮಾರ್, ನಾಸಿರ್ ಗೋಪಿನಾಥ್, ಸಾಧಿಕ್,ವಕೀಲ ಬಸವರಾಜ ಗಗ್ಗ, ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
BOLERO JEEP..
Discover more from Prasarana news
Subscribe to get the latest posts sent to your email.
