

ಹೊಸನಗರ:ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸದಿಂದ ಶಿಕ್ಷಕರನ್ನು ಕೂಡಲೇ ಕೈಬಿಡಬೇಕು ಎಂದು ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ನೇರಲೆ ಆಗ್ರಹಿಸಿದ್ದಾರೆ. ಈ ಕುರಿತಾಗಿ ಮಾತಾನಾಡಿದ ಅವರು ಇದುವರೆಗೆ ಬಿ ಎಲ್ ಒ ಕೆಲಸಕ್ಕೆ ಅಂಗನವಾಡಿ ಶಿಕ್ಷಕಿಯರು ಹಾಗೂ ಗ್ರಾಮ ಪಂಚಾಯಿತಿಯ ನೌಕರು ಹಾಗೂ ಕೆಲವೊಂದು ಶಾಲೆಗಳಲ್ಲಿ ಶಿಕ್ಷಕರನ್ನು ಬಿ ಎಲ್ ಒ ಕೆಲಸಕ್ಕೆ ನೇಮಕ ಮಾಡುತ್ತಿದ್ದರು ಆದರೆ ಇದೀಗ ಮಾನ್ಯ ಡಿಸಿ ಅವರ ಆದೇಶದಂತೆ ಸರ್ಕಾರಿ ಶಾಲೆಯ ಶಿಕ್ಷಕರನ್ನು ಮಾತ್ರ ಬಿ ಎಲ್ ಒ ಕೆಲಸಕ್ಕೆ ನೇಮಿಸಿರುತ್ತಾರೆ. ಮಾನ್ಯ ಶಿಕ್ಷಣ ಸಚಿವರು ಬಿ ಎಲ್ ಒ ಕೆಲಸಕ್ಕೆ ಶಿಕ್ಷಕರನ್ನು ನೇಮಿಸುವುದಿಲ್ಲ ಎಂದು ಈಗಾಗಲೇ ತಿಳಿಸಿದರು ಸಹ ಶಿಕ್ಷಕರನ್ನು ಬಿ ಎಲ್ ಒ ಕೆಲಸಕ್ಕೆ ನಿಯೋಜಿಸಿರುವುದು ಸರಿಯಲ್ಲ
ಶಾಲೆಯಲ್ಲಿ ಮಕ್ಕಳ ದಾಖಲಾತಿ, ಕ್ರೀಡಾಕೂಟ, ಪ್ರತಿಭಾ ಕಾರಂಜಿ ಸೇರಿದಂತೆ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಮತ್ತು ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಒಂದು ತಿಂಗಳ ಕಾಲ ಮತದಾರರ ಪಟ್ಟಿ ತಯಾರಿಕೆ, ಮತ್ತು ಮನೆ ಮನೆಗೆ ಬೇಟಿ ಕರ್ತವ್ಯದಲ್ಲಿ ಶಿಕ್ಷಕರು ತೊಡಗಿಕೊಂಡಾಗ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಶಿಕ್ಷಕರನ್ನು ಬಿ.ಎಲ್.ಒ. ಕರ್ತವ್ಯಕ್ಕೆ ನಿಯೋಜಿಸಬಾರದೆಂದು 2018ರಲ್ಲಿ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಸರ್ವೋಚ್ಚ ನ್ಯಾಯಾಲಯವು ಆದೇಶ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಹೇಳಿಕೆಯನ್ನು ಮನಗಂಡು, ಸರ್ಕಾರ ಮತ್ತು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕೆಂದು ಅವರು ಆಗ್ರಹಿಸಿದರು. ಹಾಗೂ
ಈ ಆದೇಶವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ಪೋಷಕರು ಒತ್ತಡವನ್ನು ತರುತ್ತಿದ್ದಾರೆ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಈ ಆದೇಶದ ಸರ್ಕಾರಿ ಶಾಲೆಯ ಪೋಷಕರು ತೀವ್ರವಾದ ಪ್ರತಿಭಟನೆಯನ್ನು ಮಾಡಲು ತೀರ್ಮಾನಿಸಿರುತ್ತಾರೆ ಎಂದು ತಿಳಿಸಿದರು..
BOOTH LEVEL OFFICER..
Discover more from Prasarana news
Subscribe to get the latest posts sent to your email.