BRAHMESHWAR:ಏ.20 ರಂದು ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇಗುಲದ ಅಡಿಗಲ್ಲು ಸಮಾರಂಭ..

ಹೊಸನಗರ: ಐತಿಹಾಸಿಕ ಹಿನ್ನೆಲೆಯ ಬ್ರಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ಅಧಿಷ್ಠಾನ ಅಡಿಗಲ್ಲು ಸಮಾರಂಭ ನಾಳೆ ಬೆಳಿಗ್ಗೆ 10.30 ಕ್ಕೆ ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಲಿದ್ದಾರೆ ಎಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಸುಧೀರ್ ಜಿಎನ್ ತಿಳಿಸಿದ್ದಾರೆ.
ಈ ಕುರಿತಾಗಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತೀರ್ಥಹಳ್ಳಿ ತಾಲೂಕು ಕೋಣಂದೂರು ಮಳಲಿಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಲಿದ್ದು, ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಮ್ಮುಖದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಲಿವೆ.
ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಡಿ.ಎಸ್. ಅರುಣ್, ಸಿದ್ದಾಪು ಅಲಳ್ಳಿಮಠದ ಆಗಮಶಾಸ್ತ್ರ ಪಂಡಿತ್ ವೇ. ಶ್ರೀ ಪುಟ್ಟಯ್ಯ ಶಾಸ್ತ್ರಿ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ.ಎನ್. ಸುಧೀರ್ ವಹಿಸಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಅವರು ಕೋರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಬಗೋಡು ಹಾಲಪ್ಪಗೌಡ, ಚಿಕ್ಕಮಣತಿ ಬಿ.ಯುವರಾಜ್, ಜಯಮ್ಮ ದೇವರಾಜ್, ಯತೀಶ್, ಚಂದ್ರಶೇಖರ್, ವಸಂತ್, ಮಹೇಂದ್ರ ಮಂಡ್ರಿ, ಶಿವಾನಂದ ಮಾವಿನಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

BRAHMESHWAR.


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading