

ಹೊಸನಗರ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಹೊಸನಗರ ತಾಲೂಕು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.ಬಳಿಕ
ಬಿಜೆಪಿ ತಾಲೂಕು ಅಧ್ಯಕ್ಷರಾದ ಸುಬ್ರಹ್ಮಣ್ಯ ಮತ್ತಿ ಮನೆ ಮಾತನಾಡಿ, ರೈತ ಹಾಗೂ ಜನಪರ ಹೋರಾಟದ ಮೂಲಕವೇ ರಾಜಕಾರಣ ಆರಂಭಿಸಿದ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಕಂಡಂತಹ ಧೀಮಂತ ರಾಜಕಾರಣಿಯಾಗಿದ್ದಾರೆ. ಶಾಸಕರಾಗಿ, ವಿಪಕ್ಷ ನಾಯಕರಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಅಧಿಕಾರಕ್ಕೆ ತಂದಂತಹ ಯಡಿಯೂರಪ್ಪ ರಾಜ್ಯದ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದು ಅವರೊಬ್ಬ ಮಾದರಿ ರಾಜಕಾರಣಿ ಎಂದರು.ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಕಂಚುಗಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಸ್ವಾಮಿರಾವ್, ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಲಗದ್ದೆ ಉಮೇಶ್, ದೇವಾನಂದ್, ಶ್ರೀಪತಿ ರಾವ್, ಮೋಹನ ಮಂಡನಿ, ನಿತಿನ್ ನಗರ, ಮಂಜು ಸಂಜೀವ, ಸತೀಶ್, ಮನು, ಮುಂತಾದವರು ಉಪಸ್ಥಿತರಿದ್ದರು.
BSY:BIRTHDAY..
Discover more from Prasarana news
Subscribe to get the latest posts sent to your email.