

ಹೊಸನಗರ: ಪ್ರತಿಯೊಬ್ಬ ವಿದ್ಯಾರ್ಥಿಯ ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಜೊತೆಗೆ ನಿರಂತರವಾಗಿ ಆ ಕಾಲೇಜಿನೊಂದಿಗೆ ಸಂಪರ್ಕವನ್ನು ಹೊಂದಿರಬೇಕು ಇದು ಆ ಕಾಲೇಜಿನ ಏಳಿಗೆಗೆ ಸಹಕಾರಿಯಾಗಲಿದೆ ಎಂದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಂದು ಹೊಸನಗರ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25 ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ರೇಂಜರ್ಸ್ ಮತ್ತು ರೋವರ್ಸ್, ಕ್ರೀಡಾ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕ ಮತ್ತು ವಿವಿಧ ಚಟುವಟಿಕೆಗಳ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪಠ್ಯದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡಬೇಕು. ಮಾನಸಿಕ ಆರೋಗ್ಯ ಜತೆಗೆ ರಾಷ್ಟ್ರೀಯ ಅಂತಾ ರಾಷ್ಟ್ರೀಯಮಟ್ಟದಲ್ಲಿ ಸಾಧನೆ ಮಾಡಬಹುದಾದ ಅವಕಾಶಗಳು ದೊರೆಯುತ್ತದೆ. ವಿದ್ಯಾರ್ಥಿ ಜೀವನದಲ್ಲಿ ತುಂಟಾಟ ಸಹಜ. ತುಂಟಾಟದೊಂದಿಗೆ ಉತ್ತಮ ಭವಿಷ್ಯ ರೂಪಿಸಿ ಕೊಳ್ಳಿವ ಕಡೆ ಪ್ರತಿಯೊಬ್ಬರೂ ಗಮನಹರಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳಿಗೆ ಸಂಯಮ ಬೆಳೆಯುವುದರ ಜತೆಗೆ ಸದೃಢ ಆರೋಗ್ಯ ವದ್ಧಿಸಲು ಸಹಕಾರಿ. ಅಲ್ಲದೇ ಭವಿಷ್ಯದಲ್ಲಿ ಸಮಾಜದಲ್ಲಿ ಒಬ್ಬ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಹಕಾರಿ ಎಂದರು ಹಾಗೆಯೇ ಒಬ್ಬ ವಿದ್ಯಾರ್ಥಿ ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರು ತನಗೆ ವಿದ್ಯೆಯನ್ನು ಕಲಿಸಿದ ಗುರುಗಳನ್ನು ಎಂದಿಗೂ ಗೌರವಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು ಈ ಸಂದರ್ಬದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಮಣ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಮಹೇಂದ್ರ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಅಶ್ವಿನಿ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ ಉಮೇಶ್, ಮುಂತಾದವರು ಉಪಸ್ಥಿತರಿದ್ದರು.
CLOSING CEREMONY.
Discover more from Prasarana news
Subscribe to get the latest posts sent to your email.