CM.D K Sಹೊಸನಗರ ಸರ್ಕಾರಿ ನೌಕರರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಆನ್‌ಲೈನ್ ಸಂವಾದ…

ಹೊಸನಗರ: ಆಡಳಿತದಲ್ಲಿ ಪಾರದರ್ಶಕತೆ ತರುವ ಹಾಗೂ ಜನಸ್ನೇಹಿ ಸೇವೆಯನ್ನು ಒದಗಿಸುವ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮಂಗಳವಾರ ರಾಜ್ಯ ಸರ್ಕಾರಿ ನೌಕರರೊಂದಿಗೆ ಪಟ್ಟಣದ ಈಡಿಗರ ಸಭಾಭವನದಲ್ಲಿ ವಿಡಿಯೋ ಸಂವಾದ ನಡೆಸಿದರು.
ಸಂವಾದದಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು ಹಾಗೂ ನೌಕರರು ಪಾಲ್ಗೊಂಡಿದ್ದರು ಸಂವಾದದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳನ್ನ ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಸಂವಾದವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಸಾರ್ವಜನಿಕರಿಗೆ ಯಾವುದೇ ಭ್ರಷ್ಟಾಚಾರ ರಹಿತ ಮತ್ತು ಪಾರದರ್ಶಕ ಆಡಳಿತವನ್ನು ನೌಕರರು ಒದಗಿಸುವಂತೆ ತಿಳಿಸಿದ್ದಲ್ಲದೆ ಸಾರ್ವಜನಿಕರು ನೀಡುವ ಅರ್ಜಿ ಅಥವಾ ದೂರುಗಳನ್ನು ಅನಗತ್ಯವಾಗಿ ವಿಳಂಬ ಮಾಡದೇ, ಕಾನೂನಿನ ಚೌಕಟ್ಟಿನಲ್ಲಿ ತಕ್ಷಣವೇ ಪರಿಹರಿಸಬೇಕು.ಆಡಳಿತದಲ್ಲಿ ಅನಗತ್ಯ ವಿಳಂಬ ಮತ್ತು ಕೆಂಪು ಪಟ್ಟಿಯ (Red Tape) ಸಂಸ್ಕೃತಿಯನ್ನು ಸಂಪೂರ್ಣವಾಗಿ ತೊಡೆದುಹಾಕಬೇಕು ಎಂದು ತಿಳಿಸಿದರು.ಕಚೇರಿಗಳಿಗೆ ಬರುವ ನಾಗರಿಕರನ್ನು ಗೌರವದಿಂದ ನಡೆಸಿ, ಮಾನವೀಯತೆ ಹಾಗೂ ಅನುಕಂಪದಿಂದ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಮತ್ತು ಆಡಳಿತ ಪ್ರಕ್ರಿಯೆಯನ್ನು ಸುಲಭಗೊಳಿಸಲು ಗರಿಷ್ಠ ಮಟ್ಟದಲ್ಲಿ ಡಿಜಿಟಲ್ ತಂತ್ರಜ್ಞಾನ ಮತ್ತು ಆಡಿಯೋ-ವಿಶುವಲ್ ಮೂಲಸೌಕರ್ಯಗಳನ್ನು ಬಳಸಿಕೊಳ್ಳಲು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಕಟ್ಟುನಿಟ್ಟಿನ ಜಾರಿಗೆ ಸೂಚನೆ..

ಸರ್ಕಾರದ ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಗಳು (ಗ್ಯಾರಂಟಿಗಳು) ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿರುವುದನ್ನು ತಳಮಟ್ಟದ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಅಲ್ಲದೇ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ಲೋಪದೋಷಗಳು ಕಂಡುಬಂದಲ್ಲಿ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸೋಮವಾರದಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

C M. D K S...


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading