

ಉಡುಪಿ : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ನಿಧನರಾದರು ಎಂದು ವರದಿಯಾಗಿದೆ. ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದರು.ಕಾಮಿಡಿ ಕಿಲಾಡಿಗಳು ಸೀಸನ್ 3ರಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ರಾಕೇಶ್ ಪೂಜಾರಿ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ.
COMEDY KHILADIGALU..
Discover more from Prasarana news
Subscribe to get the latest posts sent to your email.