
ತೀರ್ಥಹಳ್ಳಿ: ಕೌಶಿಕ್ ಭಂಡಾರಿ ವಸುವೆ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಇಂಟೆಕ್ (INTUC) ವಿಭಾಗದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಅವರು ಕೌಶಿಕ್ ಭಂಡಾರಿ ಅವರ ಸಂಘಟನಾ ಶಕ್ತಿಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಿದ್ದಾರೆ.
ಬಳಿಕ ಮಾತನಾಡಿದ ಕೌಶಿಕ್ ಭಂಡಾರಿ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಜವಾಬ್ದಾರಿಯನ್ನು ನೀಡಿದಂತಹ ಜಿಲ್ಲೆಯ ಹಾಗೂ ತಾಲೂಕಿನ ಹಿರಿಯ ಕಿರಿಯ ಎಲ್ಲಾ ಮುಖಂಡರಿಗೆ ಧನ್ಯವಾದಗಳು ತಿಳಿಸುತ್ತೇನೆ ಅಲ್ಲದೆ ಪಕ್ಷದ ಹಿರಿಯ ಮುಖಂಡರು ಹಾಗೂ ಹಿರಿಯ ಕಿರಿಯ ಎಲ್ಲಾ ಕಾರ್ಯಕರ್ತರ ಸಹಕಾರ ಹಾಗೂ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಳ್ಳುತ್ತೇನೆ ಎಂದು ತಿಳಿಸಿದರು. ಹಾಗೂ ಆಯ್ಕೆಯಾಗಲು ಸಹಕರಿಸಿದ ಎಲ್ಲರನ್ನು ಈ ಸಂದರ್ಭದಲ್ಲಿ ಸ್ಮರಿಸಿದರು.
CONGRESS
Discover more from Prasarana news
Subscribe to get the latest posts sent to your email.
