
ಹೊಸನಗರ:ಪಟ್ಟಣ ಪಂಚಾಯತ್ ವ್ಯಾಪ್ತಿಯ ನೆಹರು ಕ್ರೀಡಾಂಗಣ ಮುಂಭಾಗ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮೀಪ ಶಾಸಕರ ವಿಶೇಷ ಅನುದಾನದಲ್ಲಿ ಬೀದಿಬದಿ ವ್ಯಾಪಾರಿಗಳಿಗಾಗಿ ನಿರ್ಮಾಣವಾಗುತ್ತಿರುವ ಫುಟ್ ಕೋರ್ಟ್ ಕಾಮಗಾರಿಗೆ ಮಾನ್ಯ ಉಚ್ಚ ನ್ಯಾಯಾಲಯವು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಈ ಕುರಿತಾಗಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಎಂ ಎನ್ ಸುಧಾಕರ್ ಫುಡ್ ಕೋರ್ಟ್ ನಿರ್ಮಾಣ ಕಾಮಗಾರಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾಮಗಾರಿಯನ್ನು ನಡೆಸುತ್ತಿದ್ದು ಇದೊಂದು ಅನಧಿಕೃತ ಕಾಮಗಾರಿ ಆಗಿದ್ದು ಈ ನಿಟ್ಟಿನಲ್ಲಿ ಇವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆ ನಡೆಯಲಿರುವ ಜೂನ್ 3ರ ವರೆಗೆ ಯಾವುದೇ ಕಾಮಗಾರಿ ನಡೆಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಅಲ್ಲದೆ, ಈ ಫುಡ್‌ಕೋರ್ಟ್‌ಗೆ ಸಂಬಂಧಿಸಿದಂತೆ ಯಾವುದೇ ಉದ್ಘಾಟನಾ ಕಾರ್ಯಕ್ರಮಗಳು ನಡೆಯದಂತೆ ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ..
COURT ORDER
Discover more from Prasarana news
Subscribe to get the latest posts sent to your email.
