COWSHED:ಹೊಸನಗರ:ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ, ಜಾನುವಾರುಗಳ ರಕ್ಷಣೆ..

ಹೊಸನಗರ: ತಾಲೂಕಿನ ಹುಂಚ ಹೋಬಳಿಯ ವಸವೆ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಕೊಟ್ಟಿಗೆಯು ಬಹುತೇಕ ಸುಟ್ಟು ಕರಕಲಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.


ವಸವ ಗ್ರಾಮದ ವಾಸಿ ವಾಸಿ ಇಂದಿರಾ ಕೃಷ್ಣಮೂರ್ತಿ ಎಂಬುವರ ಮನೆಯ ದನದ ಕೊಟ್ಟಿಗೆಯಲ್ಲಿ ಘಟನೆ ಮಧ್ಯಾಹ್ನ ಸರಿಸುಮಾರು 3 ಗಂಟೆಗೆ ಸಂಭವಿಸಿದ್ದು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು, ಕೊಟ್ಟಿಗೆಯೊಳಗೆ ಕಟ್ಟಲಾಗಿದ್ದ ಜಾನುವಾರುಗಳನ್ನು ಸುರಕ್ಷಿತವಾಗಿ ಹೊರಗೆ ತಂದು ರಕ್ಷಿಸಿದ್ದಾರೆ. ಬೆಂಕಿ ಅವಘಡದ ತೀವ್ರತೆಗೆ ಕೊಟ್ಟಿಗೆಯಲ್ಲಿದ್ದ ಮೇವು, ಹೆಂಚು ಹಾಗೂ ಪಕಾಸಿಗಳು ಸಂಪೂರ್ಣ ಸುಟ್ಟು ಹೋಗಿವೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

COWSHED..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading