
ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಧ್ಯರಾತ್ರಿ ಘಟನೆ ಸಂಭವಿಸಿದೆ.
ತಟ್ಟೆಕೊಡ್ಲು ನಿವಾಸಿ ರಾಮಚಂದ್ರ ಭಟ್ (85) ಸಾವನ್ನಪ್ಪಿದ ದುರ್ದೈವಿ. ಭಾನುವಾರ ಮಧ್ಯರಾತ್ರಿ ಸುಮಾರಿಗೆ ಸಿಂಗಲ್ ಬ್ಯಾರಲ್ ಗನ್‌ನಿಂದ ತಮಗೆ ತಾವೇ ಶೂಟ್ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ರಾಮಚಂದ್ರ ಭಟ್ ಅವರ ತಲೆ ಛಿದ್ರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ರಾಮಚಂದ್ರ ಭಟ್ ಅವರು ಬಳಸಿದ ಸಿಂಗಲ್ ಬ್ಯಾರಲ್ ಗನ್‌ಗೆ ಲೈಸೆನ್ಸ್ ಇತ್ತೇ ಎಂಬ ಬಗ್ಗೆ ಹಾಗೂ ವಯೋಸಹಜ ಅಶಕ್ತತೆಯ ನಡುವೆಯೂ ಅವರು ಗನ್‌ನ ಟ್ರಿಗರ್ ಅನ್ನು ಹೇಗೆ ಪ್ರೆಸ್ ಮಾಡಿದರು ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸೋಕೋ ತಂಡ ಭೇಟಿ ನೀಡಲಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
CRIME.
Discover more from Prasarana news
Subscribe to get the latest posts sent to your email.
