
ಹೊಸನಗರ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಅವರಿಗೆ ಹೊಸನಗರ ತಾಲೂಕು ಒಕ್ಕಲಿಗರ ಸಂಘದಿಂದ ಅಭಿನಂದನೆಯನ್ನು ತಿಳಿಸಿದೇ.
ಈ ಕುರಿತಾಗಿ ಮಾತನಾಡಿದ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಹಾಲಗದ್ದೆ ಉಮೇಶ್ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಅತ್ಯುನ್ನತ ಹುದ್ದೆಗೇರಿರುವುದಕ್ಕೆ ಸಂಘದ ಪದಾಧಿಕಾರಿಗಳು ಮತ್ತು ಸಮುದಾಯದ ಮುಖಂಡರಿಗೆ ಹೆಮ್ಮೆಯ ವಿಷಯವಾಗಿದ್ದು ಅವರ ಆಡಳಿತಾವಧಿಗೆ ಸಂಘವು ಶುಭ ಹಾರೈಸಲಿದೆ ಎಂದು ತಿಳಿಸಿದರು。ಡಿ.ಕೆ. ಶಿವಕುಮಾರ್ ಅವರು ಜೂನ್ 3, 2026 ರಂದು ಬೆಂಗಳೂರಿನ ಲೋಕಭವನದಲ್ಲಿ ರಾಜ್ಯದ 34ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ತಮ್ಮ ಮುಂದಿನ ಅಧಿಕಾರ ಅವಧಿಯಲ್ಲಿ ಕರ್ನಾಟಕ ರಾಜ್ಯವು ಇನ್ನಷ್ಟು ಅಭಿವೃದ್ಧಿ ಪಥದತ್ತ ಸಾಗುವ ಜೊತೆಗೆ ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಇನ್ನಷ್ಟು ಒಲವನ್ನು ತೋರುವವಂತಾಗಲಿ ಎಂದು ಈ ಸಂದರ್ಭದಲ್ಲಿ ತಿಳಿಸಿದರು ಈ ವೇಳೆ ತಾಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
D K SIVAKUMAR..
Discover more from Prasarana news
Subscribe to get the latest posts sent to your email.
