DEATH NEWS:ಹೊಸನಗರ ತಾಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ನಿಧನ..

ಹೊಸನಗರ: ತಾಲೂಕು ಬಿಜೆಪಿ ಘಟಕದ ಅಧ್ಯಕ್ಷರಾದ ಮತ್ತಿಮನೆ ಸುಬ್ರಮಣ್ಯ(55) ಇಂದು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.
ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನ  ನಗರದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆ ಉಸಿರೆಳೆದಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದ ಸುಬ್ರಮಣ್ಯ ಅವರು ಈ ಹಿಂದೆ ಗ್ರಾಮ ಪಂಚಾಯತ್ ಸದಸ್ಯರಾಗಿ ಅಧ್ಯಕ್ಷರಾಗಿ ತಾಲೂಕ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು ಅಲ್ಲದೆ ಕಳೆದ ಮೂರು ವರ್ಷಗಳಿಂದ ಹೊಸನಗರ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು
ಮೃತರಿಗೆ ಮಡದಿ ಇಬ್ಬರು ಗಂಡು ಮಕ್ಕಳಿದ್ದು ಅಪಾರ ಬಂಧು ಮಿತ್ರರನ್ನ ಅಗಲಿದ್ದಾರೆ.

ಸಂತಾಪ: ಮೃತರ ಅಗಲಿಕೆಗೆ ಸಂಸದರಾದ ಬಿ ವೈ ರಾಘವೇಂದ್ರ ಶಾಸಕರಾದ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸಂತಾಪ ಸೂಚಿಸಿದ್ದಾರೆ.

DEATH NEWS.


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading