DEATH NEWS:ವಿದ್ಯುತ್ ಸ್ಪರ್ಶಿಸಿ ರೈತ ಸ್ಥಳದಲ್ಲೇ ಮತ್ತೋರ್ವ ಗಂಭೀರ..
ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ಕುಟುಂಬಸ್ಥರಿಗೆ ಸಚಿವ ಹಾಗೂ ಶಾಸಕರಿಂದ ಸಾಂತ್ವನ..

ಹೊಸನಗರ: ಅಡಿಕೆ ಕೊನೆ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ರೈತರೊಬ್ಬರು ಸ್ಥಳದಲ್ಲಿ ಸಾವನಪ್ಪಿ ಮತ್ತೊಬ್ಬರೂ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ತ್ರಿಣೀವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಕೊಡಿಗೆ ಗ್ರಾಮದ ಮಂಡ್ರಹಳ್ಳಿ ಎಂಬಲ್ಲಿ ಪುಟ್ಟಸ್ವಾಮಿ(45) ಎಂಬ ರೈತರೊಬ್ಬರು ಪರಿಚಯಸ್ಥರ ತೋಟದಲ್ಲಿ ಅಡಿಕೆ ಕೊನೆಯನ್ನ ಕೊಯ್ಯುವ ವೇಳೆ ಆಕಸ್ಮಿಕವಾಗಿ ಕೊನೆ ಕೊಯ್ಯುವ ದೂಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಇದೇ ಸಮಯದಲ್ಲಿ ಅವರೊಂದಿಗೆ ಕೆಲಸಕ್ಕೆಂದು ತೆರಳಿದ್ದ ರವಿಶೆಟ್ಟಿ(35) ಎಂಬುವವರು ಪುಟ್ಟಸ್ವಾಮಿಯವರನ್ನ ರಕ್ಷಿಸಲು ಹೋಗಿ ಅವರಿಗೂ ಸಹ ವಿದ್ಯುತ್ ಸ್ಪರ್ಶಿಸಿ ಗಂಭೀರ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸಚಿವರು ಮತ್ತು ಶಾಸಕರಿಂದ ಕುಟುಂಬಸ್ಥರಿಗೆ ಸಾಂತ್ವನ.

ಕಾರ್ಯಕ್ರಮ ನಿಮಿತ್ತ ಹೊಸನಗರಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ತೆರಳಿ ಅಧಿಕಾರಿಗಳಿಗೆ ಶೀಘ್ರ ಕಾನೂನು ಪ್ರಕ್ರಿಯೆಯನ್ನು ಮುಗಿಸಿ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತೆ ಸೂಚಿಸಿದರು  ಅಲ್ಲದೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ ಹೊಲಗದ್ದೆ ತೋಟಗಳಲ್ಲಿ ಕೆಲಸ ನಿರ್ವಹಿಸುವಾಗ ಪ್ರತಿಯೊಬ್ಬ ರೈತರು ಜಾಗೃತರಾಗಿ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ರೈತನಿಗೆ ತಿಳಿಸಿದರು..

DEATH NEWS..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading