Flash News

DEATH NEWS:ಖಾಸಗಿ ಬಸ್ ಚಾಲಕ ಸುರೇಶ್  ನಿಧನ..

ಹೊಸನಗರ: ಹೊಸನಗರ ದಾವಣಗೆರೆ ಮಾರ್ಗದ ಖಾಸಗಿ ಬಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್(45) ಶುಕ್ರವಾರ ಮುಂಜಾನೆ ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬುಧವಾರ ಮುಂಜಾನೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರು ಹೊಸನಗರದಿಂದ ದಾವಣಗೆರೆಗೆ ತೆರಳಿದ್ದರು ಅಲ್ಲಿ ಮಧ್ಯಾಹ್ನ ಊಟ ಮಾಡುವ ವೇಳೆ ಹೋಟೆಲ್ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಕುಸಿದು ಬಿದ್ದಿದ್ದು ಅವರನ್ನು ಕೂಡಲೇ ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ತೀವ್ರ ಸ್ವರೂಪದ ಮೆದುಳಿನ ಪಾರ್ಶ್ವವಾಯು (Brain Stroke) ತುತ್ತಾಗಿದ್ದ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸಿಲ್ಲ ಬಳಿಕ ವೈದ್ಯರ ಸಲಹೆಯಂತೆ ಕುಟುಂಬಸ್ಥರು ಅವರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು ಇಂದು ಮುಂಜಾನೆ ಅವರು ನಿಧನರಾಗಿದ್ದಾರೆ.
ಮೃತರು ತಾಯಿ, ಮಡದಿ ಹಾಗೂ ಇಬ್ಬರು ಪುತ್ರಿಯರಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಸಂತಾಪ: ಗಜಾನನ ಸಂಸ್ಥೆಯಲ್ಲಿ ಕಳೆದ 12 ವರ್ಷಗಳಿಂದ ಅತ್ಯಂತ ನಿಷ್ಠೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ಬಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಸುರೇಶ್ ಅವರ ಅಕಾಲಿಕ ನಿಧನದ ಸುದ್ದಿ ನಮಗೆ ತೀವ್ರ ಆಘಾತ ಮತ್ತು ಬೇಸರವನ್ನು ಉಂಟುಮಾಡಿದೆ.ತಮ್ಮ ಸುದೀರ್ಘ ಸೇವೆಯ ಅವಧಿಯಲ್ಲಿ ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ, ಸಂಸ್ಥೆಯ ಬೆಳವಣಿಗೆಗೆ ಅವರು ನೀಡಿದ ಕೊಡುಗೆ ಅಪಾರ. ಅವರ ಸೌಮ್ಯ ಸ್ವಭಾವ ಮತ್ತು ಕರ್ತವ್ಯ ನಿಷ್ಠೆ ಎಂದಿಗೂ ಸ್ಮರಣೀಯ.ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಸಂಸ್ಥೆಯ ನೌಕರ ಸಂಘದ ಅಧ್ಯಕ್ಷರಾದ ಗೋಪಾಲ್ ಶೆಟ್ಟಿ ಅವರು ತಿಳಿಸಿದ್ದು ಸಂಸ್ಥೆಯ ಎಲ್ಲಾ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದ ಪರವಾಗಿ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

DEATH NEWS..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading