
ಹೊಸನಗರ: ಖಾಸಗಿ ಬಸ್ ನಿಲ್ದಾಣದಲ್ಲಿ ಏಜೆಂಟಾಗಿ ಕೆಲಸ ನಿರ್ವಹಿಸುತ್ತಿದ್ದ ಪ್ರವೀಣ್(40) ನಿನ್ನೆ ರಾತ್ರಿ ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಸಹ ಪಡೆಯುತ್ತಿದ್ದರು ಅನಾರೋಗ್ಯಕರಣ ದಿಂದ ಕೆಲ ದಿನಗಳಿಂದ ಕರ್ತವ್ಯಕ್ಕೆ ಬಾರದೆ ವಿಶ್ರಾಂತಿಯನ್ನು ಪಡೆಯುತ್ತಿದ್ದರು.
ಕಳೆದ 20 ವರ್ಷಗಳಿಂದ ಹೊಸನಗರ ಖಾಸಗಿ ಬಸ್ ನಿಲ್ದಾಣದಲ್ಲಿ ಏಜೆಂಟಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎಲ್ಲರಿಗೂ ಚಿರಪರಿಚಿತರಾಗಿದ್ದರು.ಎಲ್ಲರೊಂದಿಗೂ ನಗುತ್ತಾ ಬೆರೆತು ಬಾಳುವ ಸ್ವಭಾವ ಹೊಂದಿದ್ದ ಅವರು ಸ್ನೇಹ ಜೀವಿಯಾಗಿದ್ದರು.ಪತ್ನಿ ಹಾಗೂ ಒಂದು ಗಂಡು ಮಗ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಖಾಸಗಿ ಬಸ್ ನಿಲ್ದಾಣ ಏಜೆಂಟರ ಸಂಘ ಮೃತರ ಅಗಲಿಕೆಗೆ ಸಂತಾಪ ಸೂಚಿಸಿದ್ದು ಅಂತ್ಯಕ್ರಿಯೆ ಇಂದು ಮಜ್ವಾನ ಗ್ರಾಮದ ಸ್ವಗೃಹದಲ್ಲಿ ವಿಧಿವಿಧಾನಗಳು ನಡೆಯಲಿದೆ..
DEATH NEWS
Discover more from Prasarana news
Subscribe to get the latest posts sent to your email.
