
ಹೊಸನಗರ: 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆಬೆಳೆ ಯೋಜನೆ ಅಡಿಯಲ್ಲಿ ತಾಲೂಕಿನಲ್ಲಿ ಹೊಸದಾಗಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಉಚಿತವಾಗಿ ತಾಳೆ ಸಸಿಗಳನ್ನು ವಿತರಿಸಿ, ಪ್ರಸಕ್ತ ಹಾಗೂ ಮುಂದಿನ ಮೂರು ವರ್ಷಗಳ ಕಾಲ ನೆಟ್ಟ ಸಸಿಗಳ ನಿರ್ವಹಣೆಗಾಗಿ ಸಹಾಯಧನ ನೀಡಲು ಇಲಾಖೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಹೊಸದಾಗಿ ತಾಳೆಬೆಳೆ ಬೆಳೆಯನ್ನು ಅಭಿವೃದ್ಧಿ ಪಡಿಸಲು ಇಚ್ಛಿಸುವ ತಾಲೂಕಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ರೈತರು ಇಲ್ಲಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ದಿನಾಂಕ 2025ರ ಮೇ 28 ರೊಳಗೆ ಅರ್ಜಿ ಸಲ್ಲಿಸುವಂತೆ ಹಾಗು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಇಲ್ಲಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ಜಿ.ಪಂ) ಪುಟ್ಟ ನಾಯಕ್ ಕೋರಿದ್ದಾರೆ.
DEPARTMENT OF HORTICULTURAL.
Discover more from Prasarana news
Subscribe to get the latest posts sent to your email.
