
ಹೊಸನಗರ: ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನಗರ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷದ (BJP) ಪ್ರಬಲ ಆಕಾಂಕ್ಷಿಯಾಗಿರುವ ಹಾಲಗದ್ದೆ ಉಮೇಶ್ ಅವರು ತಮಗೆ ಟಿಕೆಟ್ ಸಿಗುವ ಪೂರ್ಣ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದಲ್ಲಿ ಜನಸಂಪರ್ಕ ಹಾಗೂ ಪಕ್ಷದ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಅವರು, "ನಗರ ಜಿ.ಪಂ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಮತ್ತು ಸಾರ್ವಜನಿಕರ ಸೇವಕನಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮಿಸಿದ್ದು, ಸ್ಥಳೀಯ ಮತದಾರರ ಮತ್ತು ಮುಖಂಡರ ಬೆಂಬಲ ನನಗಿದೆ," ಎಂದರು.
ಪಕ್ಷದ ಹಿರಿಯ ನಾಯಕರು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಪದಾಧಿಕಾರಿಗಳು ನನ್ನ ಸಾರ್ವಜನಿಕ ಸೇವೆ ಮತ್ತು ಪಕ್ಷ ನಿಷ್ಠೆಯನ್ನು ಗುರುತಿಸಲಿದ್ದಾರೆ. ನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ನಾಯಕತ್ವಕ್ಕೆ ಬಿಜೆಪಿ ಹೈಕಮಾಂಡ್ ಮನ್ನಣೆ ನೀಡಲಿದ್ದು, ಈ ಬಾರಿ ನನಗೆ ಸ್ಪರ್ಧಿಸಲು ಖಂಡಿತವಾಗಿಯೂ ಅವಕಾಶ ಸಿಗಲಿದೆ ಎಂಬ ದೃಢ ವಿಶ್ವಾಸ ನನಗಿದೆ," ಎಂದು ಹಾಲಗದ್ದೆ ಉಮೇಶ್ ತಿಳಿಸಿದರು.
ELECTION...
Discover more from Prasarana news
Subscribe to get the latest posts sent to your email.
