ELECTION RESULT ಉಪಚುನಾವಣೆಯಲ್ಲಿ “ಕೈ”ಹಿಡಿದ ಮತದಾರ…
ಗೆದ್ದ ಅಭ್ಯರ್ಥಿಗಳು ಪಡೆದ ಮತಗಳೆಷ್ಟು.. ಗೆಲುವಿನ ಅಂತರವೆಷ್ಟು…



ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಪ್ರತಿಷ್ಠೆಯ ಜಿದ್ದಾಜಿದ್ದಿನ ಮೂರು ಕ್ಷೇತ್ರವಾಗಿದ್ದ ಚನ್ನಪಟ್ಟಣ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಭಾರಿ ಮುಖಭಂಗ ಉಂಟುಮಾಡಿದೆ ಸಿಪಿ ಯೋಗೇಶ್ವರ್ ಪಠಾಣ ಯಾಸಿರ್ ಹಾಗೂ ಅನ್ನಪೂರ್ಣ ಗೆಲುವನ್ನು ಸಾಧಿಸುವ ಮೂಲಕ ಮೂರೂ ಕ್ಷೇತ್ರಗಳ ಕೈ ದಿಗ್ವಿಜಯಕ್ಕೆ ಸಾಕ್ಷಿಯಾಗಿದ್ದಾರೆ.
ಉಪಚುನಾವಣೆಯಲ್ಲಿ ಭಾರಿ ಸದ್ದು ಗದ್ದಲ ಮಾಡಿದ್ದ ಮುಡಾ, ವಾಲ್ಮೀಕಿ, ವಕ್ಫ್ ಹಾಗೂ ಸಚಿವ ಜಮೀರ್ ಅಹಮದ್ ಅವರ ವಿವಾದಾತ್ಮಕ ಹೇಳಿಕೆ ಮತದಾರರ ಮೇಲೆ ಯಾವುದೇ ಪರಿಣಾಮವನ್ನು ಬೀರಿಲ್ಲ ಎಂದು ನಿನ್ನೆಯ ಫಲಿತಾಂಶದಲ್ಲಿ ಸ್ಪಷ್ಟವಾಗಿದೆ.

ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ 1,12,242 ಮತಗಳನ್ನು ಪಡೆದಿದ್ದು ಏದುರಾಳಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಪಡೆದಿದ್ದರು. ಸಿಪಿ ಯೋಗೇಶ್ವರ್ ಅವರು 25,413 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.


ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ 1,00,756 ಮತಗಳನ್ನು ಪಡೆದಿದ್ದು ಎದುರಾಳಿ ಬಿಜೆಪಿ ಪಕ್ಷದ ಅಭ್ಯರ್ಥಿ ಭರತ್ ಬೊಮ್ಮಾಯಿ 87,308 ಮತಗಳನ್ನು ಪಡೆದಿದ್ದರು ಯಾಸೀರ್ ಖಾನ್ ಪಠಾಣ ಅವರು 13,448 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.
ಸಂಡೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಈ ಅನ್ನಪೂರ್ಣ 93616 ಮತಗಳನ್ನು ಪಡೆದಿದ್ದು ಎದುರಾಳಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಂಗಾರು ಹನುಮಂತು 83,967 ಮತಗಳನ್ನು ಪಡೆದಿದ್ದರು. ಈ ಅನ್ನಪೂರ್ಣ ಅವರು 9,649 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.
ಒಟ್ಟಾರೆಯಾಗಿ ಉಪಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿಯೂ ತಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದು ಪ್ರಚಂಡ ಗೆಲುವನ್ನು ಸಾಧಿಸಿದ್ದಾರೆ.

ELECTION RESULT


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading

Subscribe