

ಹೊಸನಗರ: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದ್ದು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ ಎಂದು ಟೀಕಿಸುವವರಿಗೆ ಇಂತಹ ಅಭಿವೃದ್ಧಿ ಕಾಮಗಾರಿಗಳು ಉತ್ತರವಾಗಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಹೊಸನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಸುಮಾರು 50 ಲಕ್ಷ ರು ವೆಚ್ಚದಲ್ಲಿ ಹೆಚ್ಚುವರಿ ಪ್ರಯೋಗಶಾಲೆಯನ್ನು ನಿರ್ಮಾಣ ಮಾಡುತ್ತಿದ್ದು ಇದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಜೊತೆಗೆ ಕಾಮಗಾರಿ ಪೂರ್ಣಗೊಂಡ ಬಳಿಕ ಅಗತ್ಯವಾದ ವೈದ್ಯಕೀಯ ಉಪಕರಣ, ಸಿಬ್ಬಂದಿಗಳ ನೇಮಕವೂ ಕೂಡ ಶೀಘ್ರವಾಗಿ ಮಾಡಲಿದ್ದೇನೆ ಎಂದರು ಅಲ್ಲದೆ ಮೇಲಿನ ಬೇಸಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಚಿಟ್ಟಿ ಗ್ರಾಮದ ಎಸ್ ಸಿ ಕಾಲೋನಿಕೆ ಹೋಗುವ ಸಿಸಿ ರಸ್ತೆ ಕಾಮಗಾರಿ ಹಾಗೂ ಎಮ್ ಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಗೆ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದು ಶೀಘ್ರವಾಗಿ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದರು. ಅಲ್ಲದೆ ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದಂತಹ ಆಶ್ವಾಸನೆಗಳನ್ನು ಪ್ರಾಮಾಣಿಕವಾಗಿ ಈಡೇರಿಸುತ್ತಿದ್ದು ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಹಣವನ್ನ ತಂದು ಅಭಿವೃದ್ಧಿಪಡಿಸಲಿದ್ದು ಈ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನ ಮಾಡಿದ್ದೇನೆ ಅದಕ್ಕೆ ಸ್ಪಂದಿಸಿದ ಅವರು ಅನುದಾನವನ್ನ ನೀಡುವ ಭರವಸೆಯನ್ನು ನೀಡಿದ್ದು ಕ್ಷೇತ್ರವನ್ನು ನಿರೀಕ್ಷೆಗೂ ಮೀರಿ ಅಭಿವೃದ್ಧಿ ಪಡಿಸಲಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ ೆಚ್‌ಜೆ, ಪಟ್ಟಣ ಪಂಚಾಯತ್ ಅಧ್ಯಕ್ಷ ನಾಗಪ್ಪ, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಬಿಜಿ, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಗೋಪಿನಾಥ್, ಸಿಂತಿಯಾ ಸೇರವು, ಶಾಹಿ ನಾಸೀರ್, ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ, ಮುಂತಾದವರು ಉಪಸ್ಥಿತರಿದ್ದರು.
FOUNDATION STONE LAYING..
Discover more from Prasarana news
Subscribe to get the latest posts sent to your email.