
ಹೊಸನಗರ: ಆಕ್ರಮ ಮದ್ಯ ಮಾರಾಟ ಹಾಗೂ ಗೋ ಕಳ್ಳರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದರು.
ಗುರುವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ತಾಲೂಕಿನಲ್ಲಿ ಅಕ್ರಮ ಮಧ್ಯ ಮಾರಾಟ ಹಾಗೂ ಗೋಕಳವು ಪ್ರಕರಣಗಳು ಕೇಳಿ ಬರುತ್ತಿದೆ ಇಲಾಖೆ ಒಂದಿಷ್ಟು ಪ್ರಕರಣಗಳನ್ನು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಆದರೆ ತಾಲೂಕಿನಲ್ಲಿ ಇವೆರಡು ಸಹ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಬೇಕು ಈ ನಿಟ್ಟಿನಲ್ಲಿ ಕೃತ್ಯದಲ್ಲಿ ಯಾರೇ ಭಾಗಿಯಾದರು ಅವರ ವಿರುದ್ಧ ನಿರ್ಧಾಕ್ಷಿಣ್ಯ ಕಠಿಣ ಕ್ರಮವನ್ನು ಕೈಗೊಳ್ಳಬೇಕೆಂದು ಸೂಚಿಸಿದರು ಅಲ್ಲದೆ
ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣದಲ್ಲಿ 5 ಸಾವಿರ ಪರಿಹಾರವನ್ನು ನೀಡಬೇಕು ಪ್ರತಿಯೊಬ್ಬ ಅಧಿಕಾರಿಯ ಬಡವರ ಪರವಾಗಿ ಕೆಲಸವನ್ನು ನಿರ್ವಹಿಸಬೇಕು ಎಂದು ತಿಳಿಸಿದರು.
110 ವಿದ್ಯುತ್ ಕೆ ವಿ ನಿರ್ಮಾಣಕ್ಕೆ ಈಗಾಗಲೇ ಎರಡು ಸ್ಥಳವನ್ನು ನಿಗದಿ ಮಾಡಲಾಗಿದ್ದು ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಅದನ್ನ ಶೀಘ್ರ ಪೂರ್ಣಗೊಳಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.
ತಾಲೂಕಿನಾದ್ಯಂತ 109 ಕ್ಕು ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಮಾಹಿತಿ ಇದ್ದು ಅವರನ್ನು ಮರಳಿ ಶಾಲೆಗೆ ಕರೆತರುವ ಕೆಲಸ ಆಗಬೇಕು ಅದಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಅವರ ಸಮಸ್ಯೆಗಳನ್ನು ಕುಂದು ಕೊರತೆಗಳನ್ನು ಆಲಿಸಬೇಕೆಂದು ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು
ಯಾವ ಕಾರಣಕ್ಕಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ ಅವರಿಗೆ ನನ್ನಿಂದ ಯಾವ ಸಹಕಾರ ಅಗತ್ಯವಿದೆ ಎಂಬುದನ್ನು ತಿಳಿದು ನನಗೆ ಮಾಹಿತಿಯನ್ನು ನೀಡಬೇಕೆಂದು ಸೂಚಿಸಿದರು ಯಾರೊಬ್ಬ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಡೆಂಗ್ಯೂ ಹಾಗೂ ಕೆ ಎಫ್ ಡಿ ಪ್ರಕರಣಗಳ ಕುರಿತು ನಿರ್ಲಕ್ಷ ವಹಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯವನ್ನ ನಿರ್ವಹಿಸಬೇಕು ಯಾವುದೇ ಪ್ರಕರಣಗಳು ದಾಖಲಾದಲ್ಲಿ ಅವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಎಲ್ಲಾ ಮಳೆ ಮಾಪನ ಕೇಂದ್ರಗಳು ಸರಿಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಡರು.
ಗಣೇಶ ಚತುರ್ಥಿ ಹಿನ್ನೆಲೆ ರೌಡಿ ಪರೇಡ್ ನಡೆಸಿ.
ಗಣೇಶ ಚತುರ್ಥಿ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರೌಡಿ ಪಟ್ಟಿಯಲ್ಲಿರುವ ವರನ್ನು ಕರೆಸಿ ರೌಡಿ ಪರೇಡ್ ನಡೆಸಿ ಯಾವುದೇ ಕೃತ್ಯದಲ್ಲಿ ಭಾಗಿಯಾಗದಂತೆ ಹಾಗೂ ಉದ್ವಿಗ್ನ ಪರಿಸ್ಥಿತಿಯನ್ನು ಸೃಷ್ಟಿ ಮಾಡಿದಂತೆ ಕಟ್ಟುನಿಟ್ಟಾಗಿ ಸೂಚಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಭರತ್ ರಾಜ್, ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ನರೇಂದ್ರ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ್ ಹೂವಿನ ಕೋಣೆ , ಸಿಪಿಐ ಗೌಡಪ್ಪಗೌಡ, ಬಗರ್ ಹುಕುಂ ಸಮಿತಿ ಸದಸ್ಯ ಸ್ವಾಮಿ, ಸಾಕಮ್ಮ ,ಉಪಸ್ಥಿತರಿದ್ದರು.
G K B.
Discover more from Prasarana news
Subscribe to get the latest posts sent to your email.
