GANESH CHATURTHI:ಗಣೇಶ ಚತುರ್ಥಿ; ಅಧಿಕಾರಿಗಳಿಗೆ ಹಲವು ಸೂಚನೆ ಕೊಟ್ಟ ಶಾಸಕ ಗೋಪಾಲಕೃಷ್ಣ ಬೇಳೂರು…

ಹೊಸನಗರ: ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ಸೇರಿದಂತೆ ಎಲ್ಲವು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದರು. ಸೋಮವಾರ ತಾಲ್ಲೂಕ್ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಗಣೇಶೋತ್ಸವ ಆಚರಣೆ, ನಿರ್ವಹಣೆ ಕುರಿತು ಸಭೆ ನಡೆಸಿದ ಅವರು, ಪಟ್ಟಣ ಪಂಚಾಯತ್,ಪೊಲೀಸ್, ಮತ್ತು ಅಗ್ನಿಶಾಮಕ ಪಡೆಗಳು,ಹಾಗೂ ಮೆಸ್ಕಾಂ ಸೇರಿ ಇನ್ನಿತರ ಇಲಾಖೆಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಅಥವಾ ಅವಘಡಗಳು ನಡೆಯದಂತೆ ನೋಡಿಕೊಳ್ಳಬೇಕು ಗಣೇಶ ಮೂರ್ತಿ ಪ್ರತಿಷ್ಠಾಪನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಬೆಳಕಿನ ವ್ಯವಸ್ಥೆ ಕಟ್ಟು ನಿಟ್ಟಾಗಿ ಮಾಡಿಕೊಳ್ಳುವಂತೆ ಸಮಿತಿಯ ಸದಸ್ಯರುಗಳಿಗೆ ಸೂಚನೆಯನ್ನು ನೀಡುವ ಜೊತೆಗೆ ಸ್ಥಳಗಳನ್ನ ಪರಿಶೀಲಿಸುವಂತೆ ತಿಳಿಸಿದರು ವಿಸರ್ಜನೆಯ ದಿನದಂದು ಅಗ್ನಿಶಾಮಕ ವಾಹನ ಆಂಬುಲೆನ್ಸ್  ಸಜ್ಜಾಗಿರುವಂತೆ ನೋಡಿಕೊಳ್ಳುವುದರ ಜೊತೆಗೆ ಅತ್ಯಂತ ಶಾಂತಿಯುತವಾಗಿ ಗಣೇಶ ಚತುರ್ಥಿ ಕಾರ್ಯಕ್ರಮ ನಡೆಯಲು ಅಧಿಕಾರಿಗಳು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ತಿಳಿಸಿದರು. ಜೊತೆಗೆ ಅಶಾಂತಿಯನ್ನು ಉಂಟು ಮಾಡುವವರ ವಿರುದ್ಧ ಸೂಕ್ತ ಕ್ರಮವನ್ನು ಜರಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಸಾಗರ ಉಪ ವಿಭಾಗ ಅಧಿಕಾರಿ ವೀರೇಶ್ ಕುಮಾರ್, ಎ ಎಸ್ ಪಿ ಬೆನಕ ಪ್ರಸಾದ್, ಡಿ ವೈ ಎಸ್ ಪಿ ಅರವಿಂದ ಕಲ್ಗುಚಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ್ ಹೂವಿನ ಕೋಣೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು....

GANESH CHATURTHI..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading