GKB: HOSANAGARA: ಪಂಚಾಯಿತಿವಾರು ಅವಶ್ಯಕ ಬೇಡಿಕೆ ಪಟ್ಟಿ ಸಲ್ಲಿಸಿ: ಬೇಳೂರು ಗೋಪಾಲಕೃಷ್ಣ..

ಹೊಸನಗರ: ಗ್ರಾಮ ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಜನಸಂಖ್ಯೆಗೆ ಅನುಗುಣವಾಗಿ ಸದ್ಯ ಲಭ್ಯವಿರುವ ಅನುದಾನವನ್ನ ಹೊರತುಪಡಿಸಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಬೇಕಾಗುವ ಅನುದಾನ ವಿವರವನ್ನು ಮತ್ತು ಬೇಡಿಕೆ ಪಟ್ಟಿಯನ್ನು ಸಲ್ಲಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ತಿಳಿಸಿದರು.
ಸೋಮವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2026-27ನೇ ಸಾಲಿನ ಕರಡು ಅಭಿವೃದ್ಧಿ ಯೋಜನೆ ಸಭೆಯನ್ನ ಉದ್ದೇಶಿಸಿ ಅವರು ಮಾತನಾಡಿದರು.
ಗ್ರಾಮೀಣ ಅಭಿವೃದ್ಧಿಗೆ ಸರಕಾರದಿಂದ ಬಿಡುಗಡೆ ಆಗುವ ಅನುದಾನದ ಪ್ರತಿ ಪೈಸೆ ಸದುಪಯೋಗವಾಗಬೇಕು ಹಾಗೆಯೇ ಯೋಜನೆಗೆ ಅನುಗುಣವಾಗಿ ಹಣ ಬಳಕೆ ಆಗಬೇಕು ಮತ್ತು ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಯೋಜನೆಗಳು ಅಧಿಕಾರಿಗಳ ಹಂತದಲ್ಲಿ ರೂಪಿತವಾಗಬಾರದು ಸಾರ್ವಜನಿಕರ ಸಹಭಾಗಿತ್ವದಲ್ಲಿ ಯೋಜನೆಗಳು ರಚನೆ ಆಗಬೇಕು. ಜನರ ಬೇಡಿಕೆಗಳಿಗೆ ಸ್ಪಂಧಿಸುವ ಯೋಜನೆಗಳು ದೀರ್ಘಕಾಲಿಕ ಬಾಳಿಕೆ ಬರುತ್ತವೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಜನರ ಬೇಡಿಕೆಗಳನ್ನು ಗ್ರಾಮ ಸಭೆಗಳ ಮೂಲಕ ಸಂಗ್ರಹಿಸಿ, ಯೋಜನೆಗಳನ್ನು ರೂಪಿಸಬೇಕು. ಅಭಿವೃದ್ಧಿ ಯೋಜನೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಪ್ರತೀಕವಾಗಿರಬೇಕು. ಎಲ್ಲ ವರ್ಗದ ಜನರ, ಸಮುದಾಯಗಳ ಬೇಡಿಕೆಗಳನ್ನು ಗ್ರಾಮ ಮಟ್ಟದಲ್ಲಿ ಚರ್ಚಿಸಿ, ಸೆರ್ಪಡೆಗೊಳಿಸಬೇಕು ಎಂದರು.
ಅಲ್ಲದೆ ಸಭೆಯಲ್ಲಿ ವಿವಿಧ ಇಲಾಖೆಗಳ ಕಾರ್ಯವೈಕರಿಯ ಬಗ್ಗೆ ಮಾಹಿತಿಯನ್ನು ಪಡೆದು ಜನರ ಬೇಡಿಕೆಗೆ ಅನುಗುಣವಾಗಿ ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರ ಪೂರೈಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು
ಈ ಸಂದರ್ಬದಲ್ಲಿ ತಾಲೂಕು ಪಂಚಾಯತ್ ಆಡಳಿಾಧಿಕಾರಿ ಅನ್ನಪೂರ್ಣ, ತಹಶೀಲ್ದಾರ್ ಭರತ್ ರಾಜ್,ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಕುಮಾರ್,ತಾಲೂಕು ಗ್ಯಾರಂಟೀ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ ಹೂವಿನ ಕೋಣೆ ಹಾಗೂ ವಿವಿಧ ಗ್ರಾಮಪಂಚಾಯತ್ ಅದ್ಯಕ್ಷರು ಗಳು ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

GKB HOSANAGARA


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading