

ಹೊಸನಗರ: ಪಟ್ಟಣದ ಹಲವೆಡೆ ಮಂಗಳವಾರ ಸುರಿದ ಗಾಳಿ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಕುಟುಂಬಸ್ಥರಿಗೆ ವೈಯಕ್ತಿಕ ಧನ ಸಹಾಯವನ್ನು ನೀಡಿ ಜೊತೆಗೆ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿ ಭರವಸೆಯನ್ನ ನೀಡಿದರು.
ಪಟ್ಟಣದ 9 ಮತ್ತು 4ನೇ ವಾರ್ಡಿನಲ್ಲಿ ವಿಪರೀತ ಗಾಳಿ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಮನೆಯನ್ನ ವೀಕ್ಷಿಸಿದ ಅವರು ಕೂಡಲೇ ಅವುಗಳಿಗೆ ಪರಿಹಾರವನ್ನ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಬಳಿಕ ಅಲ್ಲಿಂದ ತಾಲೂಕಿನ ವಿವಿಧ ಪ್ರದೇಶಗಳಿಗೆ ತೆರಳಿ ಹಾನಿಗಳ ಬಗ್ಗೆ ಮಾಹಿತಿಯನ್ನು ಪಡೆದು ಪರಿಹಾರಕ್ಕೆ ಸೂಚಿಸಿದರು ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರಶ್ಮಿ ಎಚ್ ಜೆ, ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಎಂ ಏನ್ ಹರೀಶ್,ಪಟ್ಟಣ ಪಂಚಾಯತ್ ಅಧ್ಯಕ್ಷರಾದ ನಾಗಪ್ಪ, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜಿ ಚಂದ್ರಮೌಳಿ, ಸದಾಶಿವ, ಮಹೇಂದ್ರ, ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ, ನಾಸೀರ್ ಮುಂತಾದವರು ಉಪಸ್ಥಿತರಿದ್ದರು.
GKB:VISIT..
Discover more from Prasarana news
Subscribe to get the latest posts sent to your email.