GOPALKRISHNA BELUR: ಗ್ರಾಮ ಸಭೆಗೆ ಅಧಿಕಾರಿಗಳು ಖುದ್ದು ಹಾಜರಾಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು…

ಹೊಸನಗರ : ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಸಭೆ ಮಾಡಿ. ಅಲ್ಲಿನ ಅವ್ಯವಸ್ಥೆ, ಕುಂದು ಕೊರತೆ ನಿರ್ವಹಿಸಲು ಸಾಧ್ಯವಾಗುತ್ತದೆ. ಗ್ರಾಮ ಸಭೆಗೆ ಅಧಿಕಾರಿಗಳು ಖುದ್ದು ಹಾಜರಾಗುವಂತೆ ನೋಡಿಕೊಳ್ಳಬೇಕು. ಸಭೆ ಬಾರದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಗ್ರಾಮಸಭೆಯಲ್ಲಿ ಮಾತ್ರ ಗ್ರಾಮೀಣ ಪ್ರದೇಶದ ಸಮಸ್ಯೆ ಕೇಳಿ ಬರಲು ಸಾಧ್ಯ. ಆ ಸಭೆಗೆ ಅಧಿಕಾರಿಗಳು ಹೋಗದೇ ಕಚೇರಿಯಲ್ಲಿ ಕಾಲಕಳೆದರೇ ಅಲ್ಲಿನ ಜನರ ಸಮಸ್ಯೆ ನಿವಾರಣೆಗೆ ಆಗಲು ಸಾಧ್ಯವಿಲ್ಲ. ಕಡ್ಡಾಯ ವಾಗಿ ಸಭೆ ನಡೆಯಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ತಾಳುವ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಅವರಿಗೆ ತಾಕೀತು ಮಾಡಿದರು.
ಗ್ರಾಮ ಪಂಚಾಯತಿಯಲ್ಲಿನ 15ನೇ ಹಣಕಾಸಿನ ಅನುದಾನ ತಡೆಹಿಡಿಯುವ ಪ್ರಯತ್ನಬೇಡ. ಕೂಡಲೇ ಹಣ ಬಿಡುಗಡೆ ಮಾಡಬೇಕು. ಎಂದು ತಾಲ್ಲೂಕು ಪಂಚಾಯತಿ ಇಒ ಅವರಿಗೆ ಸೂಚನೆ ನೀಡಿದರು.
ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ತಾಂಡವಾಡುತ್ತಿದೆ. ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಗಮನ ನೀಡುತ್ತಿಲ್ಲ. ಈ ಕೂಡಲೆ ಹೆಚ್ಚಿನ ನಿಗಾ ವಹಿಸುವಂತೆ ಎಚ್ಚರಿಸಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಬಗ್ಗೆ ಗ್ರಾಮೀಣ ಭಾಗದಲ್ಲಿ ವ್ಯಾಪಕ ಜನ ಜಾಗೃತಿ ಆಗಬೇಕಾಗಿದೆ. ಜನರು ಈ ನಿಟ್ಟಿನಲ್ಲಿ ಜಾಗೃತರಾಗಿ ವಲ್ಲಿ ಆರೋಗ್ಯ ಇಲಾಖೆ ಯೋಜನೆ ರೂಪಿಸಿಕೊಳ್ಳಬೇಕು ಎಂದರು.
ರಿಪ್ಪನ್ ಪೇಟೆ ಪಟ್ಟಣದಲ್ಲಿರುವ ಆಸ್ಪತ್ರೆಗೆ ಹೆಚ್ಚಿನ ವೈದ್ಯರ ಅವಶ್ಯಕತೆ ಇದೆ.  ಇರುವ ಒಬ್ಬ ವೈದ್ಯರಿಂದ ಆಸ್ಪತ್ರೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.  ಮತ್ತೊರ್ವ ವೈದ್ಯರನ್ನು ನೇಮಕ ಮಾಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ಜತೆ ಫೋನ್ ಮೂಲಕ ಮಾತನಾಡಿ ಒತ್ತಾಯಿಸಿದರು.

ಮಕ್ಕಳ ಆರೋಗ್ಯ ಮುಖ್ಯ:
ಮಕ್ಕಳ ಆರೋಗ್ಯ ಪಾಲನೆ ಮತ್ತು ಅವರ ಆಹಾರ ಸೌಲಭ್ಯಗಳ ವಿಚಾರದಲ್ಲಿ ಗಮನ ನೀಡದೆ ಅಂಗನವಾಡಿ ಶಿಕ್ಷಕಿಯರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಳಲಿ ಮತ್ತಿತರರ ಅಂಗನವಾಡಿ ಕೇಂದ್ರಗಳ ಕುರಿತು ದೂರು ಬರುತ್ತಿದೆ. ತಪ್ಪು ಮಾಡಿದವರನ್ನು ರಕ್ಷಿಸುವ ಕೆಲಸ ಬೇಡ ಎಂದು ಎಚ್ಚರಿಕೆ ನೀಡಿದರು.

GOPALKRISHNA BELUR..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading