GOVERNMENT:SCHOOL: ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ: ಗೋಪಾಲಕೃಷ್ಣ ಬೇಳೂರು….

ಹೊಸನಗರ: ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಅವುಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಕೆಲಸವನ್ನು ಮಾಡುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಚಿಣ್ಣರ ಸಾಂಸ್ಕೃತಿಕ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆಗಳ ಪೈಕಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಜಿಲ್ಲೆಯ ಎರಡನೇ ಶಾಲೆ ಇದಾಗಿರುವುದು ನನಗಂತೂ ಹೆಮ್ಮೆಯ ವಿಚಾರ. ಈ ಶಾಲೆಯ ಶೈಕ್ಷಣಿಕ ಪ್ರಗತಿಗೆ ಬೇಕಿರುವಂತಹ ಎಲ್ಲ ಸರ್ಕಾರವನ್ನು ನಾನು ನೀಡಲಿದ್ದೇನೆ ಅಲ್ಲದೆ ಸರ್ಕಾರಿ ಶಾಲೆಯಲ್ಲಿ ಇಂತಹ ಉತ್ತಮ ರೀತಿಯ ಕಾರ್ಯಕ್ರಮವನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಇದಕ್ಕೆ ಇಲ್ಲಿನ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರು ಮತ್ತು ಪೋಷಕರ ಸಹಕಾರ ಶಾಲೆಯೊಂದಿಗೆ ಉತ್ತಮವಾಗಿದೆ ಎಂಬುದು ತಿಳಿಯುತ್ತದೆ ಈಗಾಗಲೇ ಈ ಶಾಲೆಯ ಶೌಚಾಲಯ ಸಭಾಂಗಣ ಮತ್ತು ಕಟ್ಟಡಕ್ಕೆ ಬಣ್ಣ ಹಚ್ಚುವ ಕೆಲಸಗಳಿಗೆ ಹಣವನ್ನು ಬಿಡುಗಡೆಗೊಳಿಸಿದ್ದು ಉಳಿದಂತೆ ಶಾಲೆಯ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಯಾವ ಕೆಲಸಗಳು ಆಗಬೇಕು ಎಂಬುದನ್ನು ನನ್ನ ಗಮನಕ್ಕೆ ತನ್ನಿ ಅವುಗಳನ್ನ ಮಾಡಿಸುವ ಕೆಲಸ ನನ್ನದು ಎಂದರು ಇದೇ ಸಂದರ್ಭದಲ್ಲಿ ಹಲವು ಸಾಧಕರಿಗೆ ಸನ್ಮಾನಿಸಿದರು ಜೊತೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸಹ ನೆರವೇರಿತು ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲ್ತುವಾರಿ ಸಮಿತಿಯ ಅಧ್ಯಕ್ಷರಾದ ರಮೇಶ್ ನೇರಲೆ, ಹೊಸನಗರ ಪಾ.ಪಂ ಅಧ್ಯಕ್ಷ ನಾಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ಆರ್ ಕೃಷ್ಣಮೂರ್ತಿ. ಹಾಗೂ ಪಟ್ಟಣ ಪಂಚಾಯಿತಿಯ ಸದಸ್ಯರುಗಳು ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು....

GOVERNMENT:SCHOOL..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading