GUARANTEE SCHEME: ಪಡಿತರ ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಚಿದಂಬರ ಹೂವಿನ ಕೋಣೆ.

ಹೊಸನಗರ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಅನ್ನಭಾಗ್ಯ' ಪಡಿತರ ಫಲಾನುಭವಿಗಳಿಗೆ ತಲುಪದೇ ಬಹುತೇಕ ಧಾನ್ಯ ಕಳ್ಳರ  ಪಾಲಾಗುತ್ತಿದ್ದು, ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮವನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ  ಚಿದಂಬರ ಹೂವಿನ ಕೋಣೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಪಂಚಾಯಿತಿ
ಸಭಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸಿ ಅಧಿಕಾರಿಗಳಿಂದ ಅಂಕಿ ಅಂಶಗಳ ಮಾಹಿತಿ ಪಡೆದರು.
ಹಾಗೆಯೇ ತಾಲೂಕಿನಲ್ಲಿ ಹೆಚ್ಚಿನ ಸೇವೆ ನೀಡಲು ಬಸ್‍ಗಳ ಅವಶ್ಯವಿದೆ ಹೆಚ್ಚುವರಿ ಬಸುಗಳನ್ನು ಸೇವೆಗೆ ನೀಡುವಂತೆ ಸಂಬಂಧಪಟ್ಟ
ಇಲಾಖೆಗೆ ಮಾಹಿತಿಯನ್ನು ನೀಡಬೇಕಾಗಿ ಅಧಿಕಾರಿಗಳಿಗೆ ಸೂಚಿಸಿದರು.
ಯುವನಿಧಿಯಡಿ ವಿದ್ಯಾರ್ಥಿಗಳ ನೋಂದಣಿಗಾಗಿ ಅಭಿಯಾನ ಕೈಕೊಂಡು ನೋಂದಣಿ ಹೆಚ್ಚಳಕ್ಕೆ ಆದ್ಯತೆಯನ್ನು ನೀಡಬೇಕು ಜೊತೆಗೆ. ಕಾಲೇಜುಗಳಲ್ಲಿ ಈ ಯೋಜನೆ ಕುರಿತು ಪ್ರಚಾರ ಕೈಕೊಳ್ಳಲು ಸೂಚಿಸಿದರು.
ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿಯ ಎಲ್ಲಾ ಸದಸ್ಯರು ತಮ್ಮ ಹಂತದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಈ ಯೋಜನೆಗಳ ಅನುಷ್ಠಾನದಿಂದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಿತಿ ಇನ್ನಷ್ಟು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು ಸಭೆಯಲ್ಲಿ ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಕುಮಾರ್ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಅಮೀರ್ ಅಮ್ಜ, ಅನುಷ್ಠಾನ ಸಮಿತಿಯ ಸದಸ್ಯರಾದ ಕರುಣಾಕರ್, ಸಂತೋಷ್, ಅನಿಲ್ ಕುಮಾರ್, ನರಸಿಂಹ ಪೂಜಾರಿ, ಸಿಂತಿಯಾ ಸೆರಾವು, ಪೂರ್ಣಿಮಾ, ಅಕ್ಷತ ನಾಗರಾಜ್, ಸುಮಂಗಲ ನಾಗರಾಜ್ ಹಾಗೂ ಕೆಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

GUARANTEE SCHEME..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading

Subscribe