
ಹೊಸನಗರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಫಲಾನುಭವಿಗಳಿಗೆ ತಲುಪಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಚಿದಂಬರ್ ಹೂವಿನ ಕೋಣೆ ತಿಳಿಸಿದರು.
ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿಪರಿಶೀಲನ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಪ್ರತಿಯೊಂದು ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಇದರಲ್ಲಿ ಯಾವುದೇ ನಿರ್ಲಕ್ಷವನ್ನ ತೋರಬಾರದು ಅಂತೆಯೇ ಪ್ರತಿ ಸಭೆಗೆ ಬಂದಂತಹ ಅಧಿಕಾರಿಗಳು ಸಭೆಯಲ್ಲಿ ಸದಸ್ಯರು ತಿಳಿಸಿದಂತಹ ಸಮಸ್ಯೆಗಳನ್ನು ಆಲಿಸುವುದಷ್ಟೇ ಅಲ್ಲ ಅದನ್ನ ಪಾಲಿಸುವ ಮೂಲಕ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಹಾಗೆಯೇ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿದ್ದು ಯಾವುದೇ ರೀತಿಯ ವಿದ್ಯುತ್ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಜೊತೆಗೆ ಅಗತ್ಯ ವಿದ್ಯುತ್ ಪೂರೈಕೆ ಬಗ್ಗೆ ಅಧಿಕಾರಿಗಳು ಗಮನವನ್ನು ಹರಿಸಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು ಅಲ್ಲದೆ ಯಾವುದೇ ವಿಷಯ ಕುರಿತು ಸಮಸ್ಯೆಗಳು ಕುರಿತು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು ತಮ್ಮ ಬಳಿ ಮಾಹಿತಿಯನ್ನು ಕೇಳಿದಾಗ ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವ ಜೊತೆಗೆ ಸೂಕ್ತ ಮಾಹಿತಿಯನ್ನು ನೀಡುವ ಕೆಲಸವನ್ನು ಮಾಡಬೇಕು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಪ್ರತಿ ಪಡಿತರ ವಿತರಣೆ ಕೇಂದ್ರಗಳಿಗೆ ಭೇಟಿ ನೀಡಿ ಮುಂದಿನ ಸ್ವಚ್ಛತೆ ಹಾಗೂ ಸಮಸ್ಯೆಗಳ ಕುರಿತು ಆಲಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬೇಕು ಹಾಗೂ ಸಕಾಲಕ್ಕೆ ಪಡಿತರಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.
ಉಳಿದಂತೆ ಸಮಿತಿಯ ಸದಸ್ಯರುಗಳು ತಾಲೂಕಿನ ವಿವಿಧ ಭಾಗಗಳಿಗೆ ಸರ್ಕಾರಿ ಬಸ್ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಮನವಿಯನ್ನು ಮಾಡಿ ಜೊತೆಗೆ ಯೋಜನೆಗೆ ಸಂಬಂಧಿಸಿ ದಂತೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುವ ಮೊದಲು ಪ್ರತಿಯೊಬ್ಬ ಸದಸ್ಯರ ಗಮನಕ್ಕೆ ಅದನ್ನು ತರಲು ಸೂಚಿಸಿದರು
ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗಳ ಕುರಿತು ಚರ್ಚಿಸಲಾಯಿತು ಅಲ್ಲದೆ ಅಧಿಕಾರಿಗಳಿಗೆ ಮುಂದಿನ ಸಭೆಯ ಒಳಗಾಗಿ ಸಭೆಯಲ್ಲಿ ಅಧಿಕಾರಿಗಳ ಮುಂದೆ ಇಡಲಾದ ಕೆಲವು ಪ್ರಶ್ನೆಗಳಿಗೆ ಸೂಕ್ತವಾದ ಉತ್ತರ ಹಾಗೂ ಪರಿಹಾರವನ್ನು ಹುಡುಕುವಂತೆ ಸೂಚಿಸಿದರು ಈ ಸಂದರ್ಭದಲ್ಲಿ ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಕುಮಾರ್,ಜಿಲ್ಲಾ ಸಮಿತಿಯ ಸದಸ್ಯರಾದ ಅಮೀರ್ ಹಮ್ಜ ಸದಸ್ಯರಾದ ಸಂತೋಷ್ ಮಳವಳ್ಳಿ. ಅನಿಲ್ ಮಾಸ್ತಿ ಕಟ್ಟೆ. ಕರುಣಾಕರ ಜೇನಿ. ನರಸಿಂಹ ಪೂಜಾರಿ. ರವಿ ಕೆರೆಹಳ್ಳಿ. ಸಿಂತಿಯ ಸೇರವೂ. ಪೂರ್ಣಿಮಾ. ಅಕ್ಷತಾ ನಾಗರಾಜ್. ಸುಮಂಗಲ. ಮಹೇಂದ್ರ ಸಭೆಯಲ್ಲಿ ಪಾಲ್ಗೊಂಡಿದ್ದರು.
GUARANTEE SCHEME..
Discover more from Prasarana news
Subscribe to get the latest posts sent to your email.
