GUARANTEE SCHEME: ಗ್ಯಾರೆಂಟಿ ಯೋಜನೆಗಳು ಮುಂದುವರೆಯಲಿದೆ ಪರಿಷ್ಕರಣೆ ಕೇವಲ ಅನರ್ಹರನ್ನ ಯೋಜನೆಯಿಂದ ಹೊರಗಿಡುವ ಪ್ರಕ್ರಿಯೆ: ಚಿದಂಬರ ಹೂವಿನ ಕೋಣೆ.

ಹೊಸನಗರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಪಂಚ ಗ್ಯಾರಂಟಿ ಯೋಜನೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ. ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಿದಂಬರ ಹೂವಿನ ಕೋಣೆ ತಿಳಿಸಿದರು.
ಮಂಗಳವಾರ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಮಟ್ಟದ ಪ್ರಗತಿ ಪರಿಶೀಲ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು  ಯೋಜನೆಗಳು ಮುಂದುವರೆಯಲಿದೆ ಆದರೆ ಅನರ್ಹರು ಮತ್ತು ನಕಲಿ ಫಲಾನುಭವಿಗಳನ್ನು ಹೊರಗಿಡಲು ಕಟ್ಟುನಿಟ್ಟಿನ ಪರಿಶೀಲನೆ ಮತ್ತು ಪಾರದರ್ಶಕತೆಗೆ ಸಲುವಾಗಿ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದು ಫಲಾನುಭವಿಗಳಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ತಿಳಿಸಿದರು.
ಹಾಗೆಯೇ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು ಈಗಾಗಲೇ ಎಂಟು ಫಲಾನುಭವಿಗಳು ವಾಸ ಸ್ಥಳದಲ್ಲಿ ಇಲ್ಲದೆ ಇರುವುದು ಖಚಿತ ಗೊಂಡಿದ್ದು ಅವರನ್ನು ಯೋಜನೆಯಿಂದ ಕೈ ಬಿಡಲಾಗಿದೆ ಎಂದು ಮಾಹಿತಿಯನ್ನು ನೀಡಿದರು ಹಾಗೆಯೇ ತೆರಿಗೆ ಪಾವತಿದಾರರು, ಮೃತಪಟ್ಟವರ ಹೆಸರಿನಲ್ಲಿ ಹಣ ಪಡೆಯುತ್ತಿರುವವರು ಹಾಗೂ ಇತರ ರಾಜ್ಯಗಳ ನಿವಾಸಿಗಳಂತಹ ಅನರ್ಹರನ್ನು ಪತ್ತೆ ಹಚ್ಚಿ, ದುರುಪಯೋಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಂದ ಮನೆ-ಮನೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

110 ಕೆವಿ ವಿದ್ಯುತ್ ಸಂಪರ್ಕ ಹಾಗೂ ಕೆಎಸ್ಆರ್ಟಿಸಿ ಡಿಪೋಸ್ಥಾಪನೆ ಕಾರ್ಯ ಪ್ರಗತಿಯಲ್ಲಿ..

ಇದೇ ಸಂದರ್ಭದಲ್ಲಿ ತಾಲೂಕಿನ ಬಹಳಷ್ಟು ವರ್ಷಗಳ ಬೇಡಿಕೆಯಾದ 110 ಕಿವಿ ವಿದ್ಯುತ್ ಸಂಪರ್ಕ ವ್ಯವಸ್ಥೆ ಹಾಗೂ ಹೊಸ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಆರಂಭಿಸಲು ಸ್ಥಳವನ್ನು ಗುರುತಿಸಿದ್ದು ಈಗಾಗಲೇ ಸರ್ವೆ ಕಾರ್ಯ ಮುಕ್ತಾಯಗೊಂಡಿದ್ದ ಮುಂದಿನ ಪ್ರಕ್ರಿಯೆಗಳು ಪ್ರಗತಿಯಲ್ಲಿದೆ ಈ ಕೆಲಸಕ್ಕೆ ಶಾಸಕರಾದ ಗೋಪಾಲಕೃಷ್ಣ ಬೇಳೂರು ಹೆಚ್ಚಿನ ಒತ್ತನ್ನ ನೀಡಿದ್ದು ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು. 
ಸಭೆಯಲ್ಲಿ ಸದಸ್ಯರಾದ ಸಂತೋಷ್ ಮಳವಳ್ಳಿ. ಅನಿಲ್ ಮಾಸ್ತಿ ಕಟ್ಟೆ. ಕರುಣಾಕರ ಜೇನಿ. ನರಸಿಂಹ ಪೂಜಾರಿ, ರಮೇಶ್ , ರವಿ ಕೆರೆಹಳ್ಳಿ, ಪೂರ್ಣಿಮಾ, ಅಕ್ಷತಾ ನಾಗರಾಜ್, ಸುಮಂಗಲ, ಮಹೇಂದ್ರ ಸಭೆಯಲ್ಲಿ ಪಾಲ್ಗೊಂಡಿದ್ದರು

GUARANTEE SCHEME..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading