
ಹೊಸನಗರ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಹೊಸನಗರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಚಿದಂಬರ್ ಹೂವಿನ ಕೋಣೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ಅನುಷ್ಠಾನ ಇಲಾಖೆಗಳು ಉತ್ತಮ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿಯೂ ಸಹ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿಗಳು ಸರ್ಕಾರದ ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಕಾರ್ಯನಿರ್ವಹಿಸಲಿದೆ ಎಂದರು.
ಗ್ಯಾರಂಟಿ ಯೋಜನೆ ಮತ್ತಷ್ಟು ಪರಿಣಾಮಕಾರಿ ಹಾಗೂ ನೂರಕ್ಕೆ ನೂರರಷ್ಟು ಫಲಾನುಭವಿಗಳಿಗೆ ತಲುಪುವ ಉದ್ದೇಶದಿಂದ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನಸ್ಪಂದನ ಸಭೆ ಮೂಲಕ ಕುಂದುಕೊರತೆ ಆಲಿಸಿ ತಾಂತ್ರಿಕ ಕಾರಣಗಳಿಂದ ಯೋಜನೆ ಪಡೆದೆ ಇದ್ದವರಿಗೆ ಸೂಕ್ತವಾದ ಪರಿಹಾರವನ್ನು ಹುಡುಕಿ ಅವರಿಗೂ ಸಹ ಯೋಜನೆ ತಲುಪುವಂತೆ ಮಾಡುವ ಉದ್ದೇಶವನ್ನು ಸಮಿತಿ ಹೊಂದಿದೆ ಎಂದರು.
ಪಡಿತರ ಚೀಟಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಿ.
ಇದೇ ಸಂದರ್ಭದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಪಡಿತರ ಚೀಟಿಗಳನ್ನ ರದ್ದು ಮಾಡುವ ಮೊದಲು ಅವುಗಳನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಅಲ್ಲದೆ ಈಗ ಬಂದಿರುವ ಪಡಿತರವನ್ನು ಯಾವುದೇ ಕಾರಣ ನೀಡದೆ ಫಲಾನುಭವಿಗಳಿಗೆ ಹಂಚುವಂತೆ ತಿಳಿಸಿದರು ಈ ಕುರಿತಾಗಿ ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಸಹ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಮುಖ್ಯಾಧಿಕಾರಿ ನರೇಂದ್ರ ಕುಮಾರ್ ಜಿಲ್ಲಾ ಸಮಿತಿಯ ಸದಸ್ಯರಾದ ಅಮೀರ್ ಹಮ್ಜ ಸದಸ್ಯರಾದ ಸಂತೋಷ್ ಮಳವಳ್ಳಿ. ಅನಿಲ್ ಮಾಸ್ತಿ ಕಟ್ಟೆ. ಕರುಣಾಕರ ಜೇನಿ. ನರಸಿಂಹ ಪೂಜಾರಿ. ರವಿ ಕೆರೆಹಳ್ಳಿ. ಸಿಂತಿಯ ಸೇರವೂ. ಪೂರ್ಣಿಮಾ. ಅಕ್ಷತಾ ನಾಗರಾಜ್. ಸುಮಂಗಲ. ಮಹೇಂದ್ರ ಸಭೆಯಲ್ಲಿ ಪಾಲ್ಗೊಂಡಿದ್ದರು.
GUARANTEE SCHEME...
Discover more from Prasarana news
Subscribe to get the latest posts sent to your email.
