Flash News

HIKING:ಕಸ್ತೂರಿ ರಂಗನ್ ವರದಿ ವಿರೋಧಿಸಿ ಸೆ 7 ರಂದು ಬಿಂತ್ಲಾ  ಗ್ರಾಮದಿಂದ ತೀರ್ಥಹಳ್ಳಿಯ ವರೆಗೆ ಪಾದಯಾತ್ರೆ.            ಪಾದಯಾತ್ರೆಯಿಂದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರನ್ನು ಹೊರಗಿಡಲು ನಿರ್ಧರಿಸಲಾಗಿದೆ: ಕಿಮ್ಮನೆ ರತ್ನಾಕರ್

ಹೊಸನಗರ:ಕಸ್ತೂರಿ ರಂಗನ್ ವರದಿ ಜಾರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿರುವ ಕಾರಣ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರನ್ನು ಪಾದಯಾತ್ರೆಯಿಂದ ಹೊರಗಿಡಲು ನಿರ್ಧರಿಸಲಾಗಿದೆ  ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶುಕ್ರವಾರ
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಕಾಡು ಪ್ರಾಣಿಗಳು ಬದುಕಬೇಕು, ಮನುಷ್ಯರು ಸಾಯಬೇಕು ಎಂಬಂತಾಗುತ್ತದೆ. ಹೀಗಾಗಿ ಈ ಯೋಜನೆಯ ಅನುಷ್ಠಾನ ಸರಿಯಲ್ಲ  ಮನುಷ್ಯರನ್ನು ಒಕ್ಕಲೆಬ್ಬಿಸಿ ಎಲ್ಲಿಗೆ ಕಳುಹಿಸುವ ಯೋಚನೆ ಇದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಕಸ್ತೂರಿ ರಂಗನ್ ಅವರು ಪರಿಸರ ತಜ್ಞರಲ್ಲ, ಅವರು ಶಿಕ್ಷಣ ತಜ್ಞರಾಗಿದ್ದರು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಪರಿಸರದ ಜೊತೆಗೆ ಮನುಷ್ಯನ ಅಸ್ತಿತ್ವವೂ ಉಳಿಯಬೇಕು. ಇದಕ್ಕೆ ಪರ್ಯಾಯ ವ್ಯವಸ್ಥೆ ಏನು ಮಾಡಲಾಗಿದೆ ಎಂಬುದನ್ನು ಸರ್ಕಾರ ತಿಳಿಸಬೇಕು ಎಂದು  ಆಗ್ರಹಿಸಿದರು.
1900ರಲ್ಲಿ ದೇಶದ ಜನಸಂಖ್ಯೆ 20 ಕೋಟಿ ಇತ್ತು. ಪ್ರಸ್ತುತ ಭಾರತದಲ್ಲಿ 140 ಕೋಟಿ ಇದೆ. ಜನಸಂಖ್ಯೆ ನಿರಂತರವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಜನರು ನೀರಿನಲ್ಲಿ, ಗಾಳಿಯಲ್ಲಿ ಮನೆ ಕಟ್ಟಲು ಸಾಧ್ಯವಿಲ್ಲ. ದೇಶದಲ್ಲಿ 30 ಕೋಟಿ ಜನ ಬಡವರಿದ್ದು, ಅವರಲ್ಲಿ ಹಲವರಿಗೆ ಸರಿಯಾದ ಸೂರು ಹಾಗೂ ಉದ್ಯೋಗವೂ ಇಲ್ಲ. ಆದ್ದರಿಂದ ಈ ರೀತಿಯ ಯೋಜನೆಗಳನ್ನು ಜಾರಿಗೊಳಿಸುವ ಮುನ್ನ ಯೋಚಿಸಬೇಕು ಎಂದರು.
ಕಸ್ತೂರಿ ರಂಗನ್ ವರದಿಯಲ್ಲಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿರುವ ಬಿಂತ್ಲಾ ಗ್ರಾಮದಿಂದ ತೀರ್ಥಹಳ್ಳಿವರೆಗೆ ಸೆ. 7ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ತೀರ್ಥಹಳ್ಳಿಯ ಪಟ್ಟಣ ಪಂಚಾಯಿತಿ ಬಳಿ ಸಾರ್ವಜನಿಕ ಸಭೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಕಸ್ತೂರಿ ರಂಗನ್ ವರದಿ ಜಾರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿರುವ ಕಾರಣ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರನ್ನು ಪಾದಯಾತ್ರೆಯಿಂದ ಹೊರಗಿಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಬೇಕಿರುವುದರಿಂದ, ಇತರ ಪಕ್ಷಗಳಲ್ಲಿದ್ದು ವರದಿಯನ್ನು ವಿರೋಧಿಸುವವರು ಭಾಗವಹಿಸಬಹುದು ಎಂದರು
ಈ ಸಂದರಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜಿ ಚಂದ್ರಮೌಳಿ, ಪ್ರಭಾಕರ, ಸದಾಶಿವ ಶ್ರೇಷ್ಠ, ಗುರು, ಅಶ್ವಿನಿ ಕುಮಾರ್, ಎಂಪಿ ಸುರೇಶ್, ಸ್ವಾಮಿ, ಶುಭಕರ ಪೂಜಾರಿ, ಕೃಷ್ಣಮೂರ್ತಿ, ಗುರು ಜಯನಗರ ಮುಂತಾದವರು ಉಪಸ್ಥಿತರಿದ್ದರು.

HIKING..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading