
ಹೊಸನಗರ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಆಗಸ್ಟ್ 29ರಂದು ಕಾರಣಗಿರಿ ದೇವಸ್ಥಾನದಿಂದ ಬೃಹತ್ ಪಾದಯಾತ್ರೆ ಕೈಗೊಳ್ಳಲಾಗಿದ್ದು ಪಾದಯಾತ್ರೆಯಲ್ಲಿ 3000ಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ಜಿಲ್ಲಾ ಸಂಚಾಲಕರಾದ ವಿದ್ಯಾಧರ್ ಗುರುಶಕ್ತಿ ತಿಳಿಸಿದರು. ಗುರುವಾರ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ, ಉದ್ದೇಶಿಸಿ ಮಾತನಾಡಿದ ಅವರು ಪಶ್ಚಿಮಘಟ್ಟ ರೈತ ಸಹಕಾರಿ ವೇದಿಕೆ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸುತ್ತಿಲ್ಲ ಬದಲಿಗೆ ಕೇರಳ ಮಾದರಿಯಂತೆ ಒಂದಿಷ್ಟು ರಿಯಾಯಿತಿಯನ್ನು ನೀಡಬೇಕೆಂಬುದು ನಮ್ಮ ಆಗ್ರಹವಾಗಿದೆ ಹಿಂದೆ ಡ್ಯಾಮ್ ಗಳ ನಿರ್ಮಾಣದಿಂದಾಗಿ ತಮ್ಮ ಆಸ್ತಿಪಾಸ್ತಿ ಮನೆಗಳನ್ನು ಕಳೆದುಕೊಂಡ ಹಲವಾರು ರೈತರು ಈವರೆಗೂ ಸೂಕ್ತವಾದ ಪರಿಹಾರವನ್ನು ಪಡೆದಿಲ್ಲ ಮತ್ತೊಮ್ಮೆ ಅವರ ಬದುಕನ್ನು ಈ ವರದಿ ಸಂಕಷ್ಟಕ್ಕೆ ಸಿಲುಕಿಸಲಿದೆ ಈ ನಿಟ್ಟಿನಲ್ಲಿ ವೇದಿಕೆ ಬೃಹತ್ ಪಾದಯಾತ್ರೆ ಕೈಗೊಂಡಿದೆ ಇದರಲ್ಲಿ ರೈತಬಾಂಧವರು ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಮ್ಮ ಬೇಡಿಕೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅತ್ಯಂತ ಸೂಕ್ಷ್ಮವಾಗಿ ತಲುಪಿಸುವ ಕೆಲಸವನ್ನು ಮಾಡಬೇಕು ಎಂದರು. ಈಗಾಗಲೇ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಭೆಗಳನ್ನು ಮಾಡಿ ಸಹಕಾರಿ ಕ್ಷೇತ್ರದ ಮೂಲಕವಾಗಿ ಈ ಕುರಿತು ಅರಿವನ್ನ ಮೂಡಿಸಿದ್ದು ಇದೊಂದು ಯಶಸ್ವಿ ಪಾದಯಾತ್ರೆಯಾಗಲಿದೆ ಎಂದರು. ಅಷ್ಟೇ ಅಲ್ಲದೆ ಪ್ರತಿಯೊಬ್ಬರೂ ವರದಿ ವಿರೋಧಿಸಿ ಆಕ್ಷೇಪಣೆಯನ್ನು ಸಲ್ಲಿಸಲು ವಿಶೇಷವಾದ ಆಪ್ ಸಿದ್ಧಪಡಿಸಲಾಗಿದ್ದು ಅದರಲ್ಲಿ ಸಹ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರಿಗೆ ಅದೇ ದಿನ ಮುಂಜಾನೆ ಹೊಸನಗರದಿಂದ ಕಾರಣಗಿರಿಗೆ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ತಮ್ಮ ವಾಹನವನ್ನು ಇಲ್ಲಿಯೇ ಬಿಟ್ಟು ಬರುವಂತೆ ತಿಳಿಸಿದರು. ಬಳಿಕ ಮಾತನಾಡಿದ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ್ 2013 ರಿಂದ ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರುವುದಾಗಿ ಹೇಳಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ. ರಾಜ್ಯದಲ್ಲಿ ಒಟ್ಟು 1,446 ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಕೇಂದ್ರ ಸರ್ಕಾರ ಗುರುತಿಸಿದೆ. ಇದರಲ್ಲಿ ಹೊಸನಗರದ 125 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ.
ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಗೆ ಆಕ್ಷೇಪಣೆ ಸಲ್ಲಿಸಲು ಸುಮಾರು 60 ದಿನಗಳ ಕಾಲಾವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿರಂಗನ ವರದಿಯನ್ನು ವಿರೋಧಿಸಿ ನಾವು ಮೊದಲಿಗೆ ಆಗಸ್ಟ್ 29 ರಂದು ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಬೆಳಗ್ಗೆ 9 ಗಂಟೆಗೆ ಕಾರಣಗಿರಿ ದೇವಸ್ಥಾನದಿಂದ ಪಾದಯಾತ್ರೆ ಕೈಗೊಂಡು ಬಳಿಕ ಮದ್ಯಾಹ್ನ 12.30 ಹೊಸನಗರ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ಬೃಹತ್ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ತಾಲೂಕಿನ ಪ್ರತಿಯೊಬ್ಬರು ಪಾಲ್ಗೊಳ್ಳುವ ಮೂಲಕ ವರದಿಯನ್ನು ವಿರೋಧಿಸಬೇಕೆಂದು ಮನವಿಯನ್ನು ಮಾಡಿದರು ಅಷ್ಟೇ ಅಲ್ಲದೆ ಪ್ರತಿಭಟನೆ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟ ಸೇರಿದಂತೆ ನಮ್ಮ ಸಾವಿರಾರು ಸಂಸ್ಥೆಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಜಿ ಪರಮೇಶ್ವರ್, ವಿನಯ್ ಕುಮಾರ್ ದುಮ್ಮ, ಮಾಸ್ತಿ ಕಟ್ಟೆ ಸುಬ್ರಹ್ಮಣ್ಯ, ಸುಮಾ ಸುಬ್ರಹ್ಮಣ್ಯ, ಪೂರ್ಣೇಶ್, ಸುಧೀಂದ್ರ ಪಂಡಿತ್, ಮುರಳಿಧರ್, ಉಪಸ್ಥಿತರಿದ್ದರು.
HIKING..
Discover more from Prasarana news
Subscribe to get the latest posts sent to your email.
