

ಹೊಸನಗರ: ಇಲ್ಲಿನ ನೆಹರು ಮೈದಾನದಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯಲ್ಲಿ ಶನಿವಾರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಮ್ಮ ಕುಟುಂಬ ಹಾಗು ಸಹದ್ಯೋಗಿ ರಾಜಕಾರಣಿಗಳು ಅಭಿಮಾನಿ ಬಳಗ ಅವರೊಂದಿಗೆ ತಮ್ಮ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು.
ಸೇರಿದ್ದು ಜನ ಸಾಗರದ ನಡುವೆ ಬೃಹತ್ ವೇದಿಕೆಯಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತವರ ತಂಡದವರೊಂದಿಗೆ ಹೆಜ್ಜೆ ಹಾಕಿ ಕುಣಿದು ಜನರನ್ನು ರಂಜಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಅವರು ಅಪ್ಪಾಜಿಯವರ ಕನಸಿನ ಕೂಸಿನಂತಿದ್ದು ಅವರ ಆಸೆ ಆಕಾಂಕ್ಷಿಗಳನ್ನು ಪೂರೈಸುವ ನಿಟ್ಟಿನಲ್ಲಿ ತೊಡಗಿದ ಪರಿಯ ಬಗ್ಗೆ ಸಂತೋಷ ವ್ಯಕ್ತಪಡಿಸಿದಲ್ಲದೇ ಹುಟ್ಟು ಹಬ್ಬಕ್ಕೆ ಶುಭ ಕೋರಿದರು.
ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ನಾನು ಸದಾ ಜನರೊಂದಿಗೆ ಕೆಲಸ ಮಾಡುತ್ತೇನೆ. ಯಾವ ಸಮಯದಲ್ಲಾದರೂ ನನ್ನನ್ನು ಸಂಪರ್ಕಿಸಬಹುದು. ಜನರ ಆರ್ಶೀವಾದದಿಂದ ಮೂರು ಬಾರಿ ಶಾಸಕನಾಗಿದ್ದೇನೆ. ಜನರ ಆಶೋತ್ತರಗಳಿಗೆ ಸ್ಪಂದಿಸುವುದು ನನ್ನ ಜವಾಬ್ದಾರಿ ಆಗಿದೆ ಎಂದರು.
ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಬಲ್ಕಿಶ್ ಬಾನು, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಶಿಮೂಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ್, ಗೋಪಾಲಕೃಷ್ಣ ಬೇಳೂರು ಅಭಿಮಾನಿ ಬಳಗದ ಗೌರವಾಧ್ಯಕ್ಷ ಕಲಗೋಡು ರತ್ನಾಕರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಗೌಡ, ಜಿಲ್ಲಾ ಯುವ ಒಕ್ಕೂಟದ ಹಾಗೂ ಅಭಿಮಾನಿ ಬಳಗದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ, ಪಟ್ಟಣ ಪಂಚಾಯತಿ ಅಧ್ಯಕ್ಷ ನಾಗಪ್ಪ ರೆಡ್ಡಿ, ಪ್ರಮುಖರಾದ ದುಮ್ಮಾ ವಿನಯಕುಮಾರ್, ಬಾವಿ ಕಟ್ಟೆ ಸತೀಶ್, ಚಿದಂಬರ ಹೂವಿನ ಕೋಣೆ, ಎಂ.ಪಿ. ಸುರೇಶ , ಆಪ್ತ ಸಹಾಯಕ ಸಣ್ಣಕ್ಕಿ ಮಂಜು ಇದ್ದರು.
ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗ ಪರವಾಗಿ ಬೆಳ್ಳಿಗಧೆ ನೀಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಶಾಸಕ ಬೇಳೂರು ಅಭಿಮಾನಿ ಬಳಗದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಮಣ್ಯ ಸ್ವಾಗತಿಸಿದರು. ನಂದಿನಿ ಸಾಗರ್ ಹಾಗೂ ಸಮನ್ವಯ ಕಾಶಿ, ನಟರಾಜ್ ಕಾರ್ಯಕ್ರಮ ನಿರೂಪಿಸಿದರು.
ನಂತರ ನಟಿ ನಿರೂಪಕಿ ಅನುಶ್ರೀ, ಚಲನಚಿತ್ರ ನಟ ರವಿಶಂಕರ್, ಯುವ ನಟ ವಿರಾಟ್, ಸಹಕಲಾವಿದರು ಹುಟ್ಟು ಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಸಂಗೀತ ಸಂಜೆ ಕಾರ್ಯಕ್ರಮ ನಡೆಸಿ ನೆರೆದಿದ್ದ ಸಹಸ್ರಾರು ಜನರನ್ನು ರಂಜಿಸಿದರು.
HOSANAGARA