
ಹೊಸನಗರ: ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳಿದ್ದ ಬಸ್ ಅಪಘಾತಕ್ಕೆ ಈಡಾದ ಘಟನೆ ಹೊಸನಗರ ತಾಲೂಕಿನ ನಗರ ಹೋಬಳಿಯ ಕರಿಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ "SDVS"ಇಂಗ್ಲಿಷ್ ಮೀಡಿಯಂ ಸ್ಕೂಲ್ ಏಳಂದೂರು ಶಾಲೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಕರೊಂದಿಗೆ ಪ್ರವಾಸಕ್ಕೆಂದು ಈ ಭಾಗಕ್ಕೆ ಬಂದಿದ್ದು ಇಂದು ಈ ಮಾರ್ಗವಾಗಿ ಹೊರನಾಡು ಹಾಗೂ ಶೃಂಗೇರಿ ಕಡೆ ಪ್ರಯಾಣವನ್ನು ಬೆಳೆಸಿದ್ದು.

ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಗುದ್ದಿದ್ದು ಚಾಲಕ ಸೇರಿ ಇಬ್ಬರು ಶಿಕ್ಷಕಿಯರಿಗೆ ಹೆಚ್ಚಿನ ಪ್ರಮಾಣದ ಗಾಯವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಉಳಿದಂತೆ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
HOSANAGARA-ACCIDENT
Discover more from Prasarana news
Subscribe to get the latest posts sent to your email.
