HOSANAGARA DASARA: ಹೊಸನಗರ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ..

ಹೊಸನಗರ:ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಇಂದು ಹೊಸನಗರ ಈಡಿಗ ಸಭಾಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ದಸರಾ ಆಚರಣೆ ಸಮಿತಿಯ ಅಧ್ಯಕ್ಷರಾದ ಡಿ ಆರ್ ವಿನಯ್ ಕುಮಾರ್ ದೀಪವನ್ನು ಬೆಳಗುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ರೀಡಾ ಗಳಿಗೆ ಚಾಲನೆಯನ್ನು ನೀಡಿದರು.
ಬಳಿಕ ಮಾತನಾಡಿ ಕಳೆದ ಬಾರಿಯಂತೆ ಈ ವರ್ಷವೂ ಸಹ ದಸರಾ ಹಬ್ಬವನ್ನು ಅತ್ಯಂತ ವಿಜ್ರಮಣೆಯಿಂದ ಆಚರಿಸಲು ಸಮಿತಿ ತೀರ್ಮಾನಿಸಿದ್ದು ಈ ನಿಟ್ಟಿನಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಮನೋರಂಜನೆ ಕಾರ್ಯಕ್ರಮಗಳನ್ನು ಮಾಡುವ ಉದ್ದೇಶದಿಂದ ಇಂದು ಮಹಿಳೆಯರಿಗೆ ವಿವಿಧ ಕ್ರೀಡೆಗಳನ್ನು ಆಯೋಜನೆ ಮಾಡಿದ್ದೇವೆ ಹಾಗೆಯೇ ಇಲ್ಲಿ ವಿಜೇತರಾದವರಿಗೆ ದಿನಾಂಕ 2-10-2025ರ ಬನ್ನಿ ಮುಡಿಯುವ ಕಾರ್ಯಕ್ರಮದ ದಿನದಂದು ಬಹುಮಾನವನ್ನು ವಿತರಿಸಲಾಗುವುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ಸಿಂತಿಯ ಸೇರಾವ್, ಶಾಹಿನ ನಾಸಿರ್, ಕೃಷ್ಣವೇಣಿ, ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಮುಖಂಡರಾದ ಬಾವಿಕಟ್ಟೆ ಸತೀಶ್, ನಾಸಿರ್, ಉದಯ್ ಗೌಡ, ಮಂಜುನಾಥ್, ದೀಪು, ಚೇತನ್ ದಾಸ್, ನಾಗರಾಜ , ವೈಶಾಲಿ ವಿನಯ್ ಕುಮಾರ್, ರಾಧಿಕಾ ಮುಂತಾದವರು ಉಪಸ್ಥಿತರಿದ್ದರು..

HOSANAGARA DASARA..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading