HOSANAGARA POLICE:  ಯಾರ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಹಬ್ಬವನ್ನು ಆಚರಿಸಿ:ಸಿಪಿಐ ಗೌಡಪ್ಪಗೌಡ

ಹೊಸನಗರ:ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದತೆಯೊಂದಿಗೆ ಯಾರ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಆಚರಿಸಿ ಎಂದು ಹೊಸನಗರ ಸಿಪಿಐ ಗೌಡಪ್ಪಗೌಡ  ಹೇಳಿದರು.
ಇಲ್ಲಿನ ಪೊಲೀಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ನಿಮಿತ್ತ ಕರೆದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಗಣಪತಿ ಪ್ರತಿಷ್ಠಾಪನೆಗೂ ಮುನ್ನ ಪೊಲೀಸ್ ಇಲಾಖೆ, ಸ್ಥಳೀಯ ಪಟ್ಟಣ ಪಂಚಾಯತ್ ಅಥವಾ ಗ್ರಾಪಂ ಹಾಗೂ ಮೆಸ್ಕಾಂ ವತಿಯಿಂದ ಕಡ್ಡಾಯ ಅನುಮತಿ ಪಡೆದಿರಬೇಕು.
ಗಣಪತಿ ಕೂರಿಸುವ ಸಂಘ ಗಳು ಅಥವಾ ಸಮಿತಿಗಳು ಮೊದಲೇ ಎಷ್ಟು ದಿನ, ಅವಧಿ, ಯಾವಾಗ ವಿಸರ್ಜನೆ ಎಂದು ಆರ್ಜಿಯಲ್ಲಿ ನಮೂದಿಸಿರಬೇಕು ಮೆರವಣಿಗೆ ಸಂದರ್ಭದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಹಾಗೂ ಮದ್ದು ಗುಂಡುಗಳನ್ನು ಸಿಡಿಸುವಂತಿಲ್ಲ. ಧ್ವನಿ ವರ್ಧಕಗಳ ಬಳಕೆ ರಾತ್ರಿ 10ರ ನಂತರ ಬಳಸುವಂತಿಲ್ಲ ಎಂದರು. ಬಳಿಕ ಮಾತನಾಡಿದ ಪಿಎಸ್ಐ ಶಂಕರ್ ಗೌಡ ಪಾಟೀಲ್ ಗಣೇಶ ಹಾಗೂ ಈದ್‌ ಮಿಲಾದ್‌ ಹಬ್ಬಗಳನ್ನು ಸಂಬಂಧಪಟ್ಟ ಇಲಾಖೆಗಳು ನೀಡುವ ಮಾರ್ಗಸೂಚಿ ಹಾಗೂ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಈ ಸಂದರ್ಭದಲ್ಲಿ ವಿವಿಧ ಧರ್ಮದ ಮುಖಂಡರುಗಳು ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

HOSANAGARA POLICE...


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading